Advertisement
ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿದ ಸಚಿವರು, ಸದ್ಯ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಸ್ಥಿತಿ ಇಲ್ಲ. ಮಕ್ಕಳ ಆರೋಗ್ಯವೇ ನಮ್ಮ ಆದ್ಯತೆ ಎಂದಿದ್ದಾರೆ.
Related Articles
Advertisement
ಶಾಲೆಗಳನ್ನು ಆರಂಭಿಸುವ ಬಗ್ಗೆ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿ ಆಯಾ ರಾಜ್ಯ ಸರಕಾರಗಳೇ ನಿರ್ಧಾರ ಕೈಗೊಳ್ಳಬೇಕು. ಹೆತ್ತವರ ಲಿಖಿತ ಒಪ್ಪಿಗೆ ಇದ್ದರೆ ಮಾತ್ರ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವುದಕ್ಕೆ ಅನುಮತಿ ನೀಡಲಾಗಿದೆ. ಹೀಗಾಗಿ ತರಗತಿಗೆ ವಿದ್ಯಾರ್ಥಿಗಳು ಹಾಜರಾಗಲೇ ಬೇಕು ಎಂದು ಆಯಾ ಶಿಕ್ಷಣ ಸಂಸ್ಥೆಗಳು ಒತ್ತಡ ಹೇರುವಂತಿಲ್ಲ. ವಿದ್ಯಾರ್ಥಿಗಳು ಆನ್‌ಲೈನ್ ಕ್ಲಾಸ್ ಮೂಲಕ ಪಾಠ ಪ್ರವಚನ ಬಯಸಿದ್ದರೆ ಅಂಥವರು ತರಗತಿಗೆ ಹಾಜರಾಗಲೇಬೇಕೆಂದು ಒತ್ತಡ ಹೇರುವಂತಿಲ್ಲ ಎಂದಿದೆ.