Advertisement
ತೀರ್ಥಹಳ್ಳಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಮುಂಜಾನೆಯಿಂದ ರಾಜ್ಯಾದ್ಯಂತ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆ ಪದಾಧಿಕಾರಿಗಳು ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಆಯಾ ತಹಶೀಲ್ದಾರ್ ಮುಂದೆ ಹಾಜರುಪಡಿಸಲಾಗಿದೆ.
ಶಿವಮೊಗ್ಗ: ಪಿಎಫ್‌ಐ ಸಂಘಟನೆ ನಿಷೇ ಧಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
Related Articles
Advertisement
ಪಿಎಫ್ಐ ಮತ್ತು ಎಸ್‌ಡಿಪಿಐ ಹಿಂದೂ-ಮುಸ್ಲಿಂರನ್ನು ಬೇರೆ ಬೇರೆ ಮಾಡುವ ಕೆಲಸ ಮಾಡುತ್ತಿದೆ. ಗೋಹತ್ಯೆ ಜತೆಗೆ ಹಿಂದೂ ಸಂಸ್ಕೃತಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದೆ. ಈ ರಾಷ್ಟ್ರದ್ರೋಹಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆ ಇರಬಾರದೆಂದು ರಾಷ್ಟ್ರಭಕ್ತ ಮುಸ್ಲಿಮರು ಕೂಡಲೇ ಖಂಡನೆ ಮಾಡಬೇಕು.-ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ