ನವದೆಹಲಿ: ಕೋವಿಡ್ 19 ಎರಡನೇಯ ಅಲೆಯ ಭೀತಿಯ ನಡುವೆ ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂಬ ಆತಂಕಕ್ಕೆ ಏಮ್ಸ್ ಸೋಮವಾರ(ಮೇ 24) ಸ್ಪಷ್ಟನೆ ನೀಡಿದ್ದು, ಕೋವಿಡ್ 3ನೇ ಅಲೆ ಮಕ್ಕಳ ಮೇಳೆ ತೀವ್ರ ಪರಿಣಾಮ ಬೀರಲಿದೆ ಎಂಬ ಬಗ್ಗೆ ಯಾವುದೇ ಅಂಶ ಕಂಡುಬಂದಿಲ್ಲ ಎಂದು ತಿಳಿಸಿದೆ.
ಇದನ್ನೂ ಓದಿ:ರಾಜ್ಯದ ಆರೋಗ್ಯ ವ್ಯವಸ್ಥೆಗೆ ಬಲ: 1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ : ಸಚಿವ ಸುಧಾಕರ್
ಕೋವಿಡ್ 3ನೇ ಅಲೆಯು ಮಕ್ಕಳು ಮತ್ತು ಯುವಜನರ ಮೇಲೆ ಬೀರುವ ಪರಿಣಾಮದ ಬಗ್ಗೆ ಮಾತನಾಡಿರುವ ದೆಹಲಿಯ ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ, ಕೋವಿಡ್ ಸೋಂಕು ಹರಡುವಿಕೆ ಮತ್ತು ಲಾಕ್ ಡೌನ್ ನಿಂದಾಗಿ ಮಕ್ಕಳು ಮಾನಸಿಕ ಒತ್ತಡ, ಸ್ಮಾರ್ಟ್ ಪೋನ್ ಚಟ ಮತ್ತು ಶಿಕ್ಷಣದ ಸವಾಲುಗಳನ್ನು ಎದುರಿಸುವಂತಾಗಿದೆ. ಆದರೆ ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ತೀವ್ರವಾಗಿ ಪರಿಣಾಮ ಬೀರುವ ಯಾವುದೇ ಸೂಚನೆಗಳಿಲ್ಲ ಎಂದು
ಆರೋಗ್ಯ ಸಚಿವಾಲಯ ಕೂಡಾ ತಿಳಿಸಿರುವುದಾಗಿ ವಿವರಿಸಿದ್ದಾರೆ.
ಏಪ್ರಿಲ್ 16ರಂದು ಭಾರತದಲ್ಲಿ 2,17,353 ನೂತನ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 27,20,716ಕ್ಕೆ ಇಳಿಕೆಯಾಗಿತ್ತು. ದೇಶದಲ್ಲಿನ ಕೋವಿಡ್ ಸೋಂಕಿತರ ಚೇತರಿಕೆ ಪ್ರಮಾಣ ಶೇ.88.69ಕ್ಕೆ ಏರಿಕೆಯಾಗಿರುವುದಾಗಿ ವರದಿ ತಿಳಿಸಿದೆ.
ದೇಶದಲ್ಲಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2,37,28,011ಕ್ಕೆ ಹೆಚ್ಚಳವಾಗಿದೆ. ಭಾರತದಲ್ಲಿ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3.03ಕ್ಕೆ ಏರಿಕೆಯಾಗಿದೆ ಎಂದು ವರದಿ ಹೇಳಿದೆ.