Advertisement

ಸಚಿವ ಸಂಪುಟ ವಿಸ್ತರಣೆ ಮಾಹಿತಿ ಇಲ್ಲ, ಪಕ್ಷದ ತೀರ್ಮಾನಕ್ಕೆ ಬದ್ಧ: ಸಚಿವ ಕೋಟ

01:04 PM Sep 18, 2020 | keerthan |

ಕುಂದಾಪುರ: ರಾಜ್ಯದ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಯಾವುದೇ ಮಾಹಿತಿ ಇಲ್ಲ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ. ಪಕ್ಷದ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Advertisement

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್ ವೈ ಸರ್ಕಾರವು ದೇಶದಲ್ಲಿ ಮಾದರಿಯಾಗುವ ಹಾಗೆ ಕೋವಿಡ್ ನಿಯಂತ್ರಣ ಮಾಡಿದೆ. ಕೋವಿಡ್ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ. ಟೀಕೆ ಮಾಡುವುದು ವಿಪಕ್ಷಗಳ ಕೆಲಸ, ಮಾಡಲಿ. ಸದನದಲ್ಲಿ ನಾವು ಉತ್ತರ ನೀಡುತ್ತೇವೆ ಎಂದರು.

ಇದನ್ನೂ ಓದಿ: ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

ಮೊದಲ ಹಂತದಲ್ಲಿ ರಾಜ್ಯದ 84 ಎ ದರ್ಜೆ ದೇವಾಲಯಗಳಿಗೆ ವ್ಯವಸ್ಥಾಪನಾ‌ ಸಮಿತಿ ವಾರದಲ್ಲಿ ನೇಮಕ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next