Advertisement

ಕಿತ್ತಳೆ ಜೆರ್ಸಿ ತೊಡುವ ಬಗ್ಗೆ ಮಾಹಿತಿ ಇಲ್ಲ

05:23 PM Jun 28, 2019 | keerthan |

ಸೌಥಾಂಪ್ಟನ್‌: ಇಂಗ್ಲೆಂಡ್‌ ವಿರುದ್ಧದ ಪಂದ್ಯಕ್ಕೆ ಕಿತ್ತಳೆ ಬಣ್ಣದ ಜೆರ್ಸಿ ತೊಟ್ಟು ಭಾರತ ಕಣಕ್ಕೆ ಇಳಿಯಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ನಮಗೆ ಇದುವರೆಗೆ ಯಾವುದೇ ಮಾಹಿತಿ ಇಲ್ಲ ಎಂದು ತಂಡದ ಬೌಲಿಂಗ್‌ ಕೋಚ್‌ ಭರತ್‌ ಅರುಣ್‌ ತಿಳಿಸಿದ್ದಾರೆ.

Advertisement

“ನಿಜವಾಗಿಯೂ ಯಾವ ಬಣ್ಣದ ಜೆರ್ಸಿ ತೊಟ್ಟು ಇಂಗ್ಲೆಂಡ್‌ ವಿರುದ್ಧ ಪಂದ್ಯ ಆಡುತ್ತೇವೆ ಎನ್ನುವ ಬಗ್ಗೆ ನಮಗೆ ಇದುವರೆಗೆ ಯಾವುದೇ ಮಾಹಿತಿ ತಿಳಿದಿಲ್ಲ. ನಾವು ಬಣ್ಣದ ಬಗ್ಗೆ ಯೋಚಿಸುವುದಿಲ್ಲ. ಪಂದ್ಯ ಗೆಲ್ಲುವುದಷ್ಟೇ ನಮ್ಮ ಗುರಿ’ ಎಂದು ತಿಳಿಸಿದರು. ಕಳೆದ ಕೆಲವು ದಿನಗಳಿಂದ ಭಾರತದ ಕಿತ್ತಳೆ ಜೆರ್ಸಿಯ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next