Advertisement

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಹಿತಿ ಇಲ್ಲ: ಪ್ರಹ್ಲಾದ್ ಜೋಶಿ

02:26 PM Jan 12, 2023 | Team Udayavani |

ಹುಬ್ಬಳ್ಳಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮದಲ್ಲಿ ವರದಿಗಳಾಗಿದ್ದು, ಈ ಕುರಿತು ಮಾಹಿತಿ ಇಲ್ಲ. ಆದರೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಕ್ತ ಕ್ರಮ ತೆಗೆದುಕೊಳ್ಳತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳುದರು.

Advertisement

ನಗರದ ರೈಲ್ವೆ ನಿಲ್ದಾಣದ ಬಳಿಯಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿಯೂ ಸಹ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಸ್ವಾಮಿ ವಿವೇಕಾನಂದರು ಸಾಮಾಜಿಕವಾಗಿ ಎಲ್ಲರಿಗೂ ಪ್ರೇರಣೆ ಕೊಡುವ ಕೆಲಸ ಮಾಡಿದ್ದಾರೆ. ಕತ್ತಲೆಯಿಂದ ಬೆಳಕಿನ ಅಗಾಧ ಶಕ್ತಿ ಹೊಂದಿದ್ದವರು ವಿವೇಕಾನಂದರು ಅವರ ಜನ್ಮದಿನ ನಿಮಿತ್ತ ಹು-ಧಾ ಅವಳಿನಗರದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಆಚರಣೆ ಮಾಡಲಾಗುತ್ತಿದೆ. ಇದೊಂದು ಅಸ್ಮರಣೀಯ ಕಾರ್ಯಕ್ರಮ ಆಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದರು.

ಬಹುತೇಕ ರಾಜಕೀಯ ಪಕ್ಷಗಳು ಜನರನ್ನು ಕರೆದುಕೊಂಡು ಕಾರ್ಯಕ್ರಮ ಮಾಡುವ ಕೆಲಸ ಹೆಚ್ಚಾಗಿವೆ. ಆದರೆ ಯುವ ಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಜನರನ್ನು ನಿಯಂತ್ರಣ ಮಾಡೋದೇ ದೊಡ್ಡ ಸಮಸ್ಯೆ ಆಗುತ್ತಿದೆ ಎಂದರು.

ಫೆ.2 ರಿಂದ ಹುಬ್ಬಳ್ಳಿ-ಪುಣೆ ವಿಮಾನ ಯಾನ ಆರಂಭವಾಗಲಿದ್ದು, ಅದು ಸದ್ಯ ಎರಡು ದಿನಗಳಿದ್ದು ಅದನ್ನು ಮುಂದಿನ ದಿನಗಳಲ್ಲಿ ವಿಸ್ತರಣೆ ಮಾಡಲು ಕೇಂದ್ರ ಸಚಿವ ರಾಜನಾಥಸಿಂಗ್ ಅವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

Advertisement

ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹಾಲಪ್ಪ ಆಚಾರ, ಶಂಕರಪಾಟೀಲ ಮುನೇನಕೊಪ್ಪ, ಡಾ.ಕೆ.ಸಿ.ನಾರಾಯಣಗೌಡ, ಮಹೇಶ ಟೆಂಗಿನಕಾಯಿ, ಲಿಂಗರಾಜ ಪಾಟೀಲ, ರಾಜಣ್ಣ, ರವಿ ನಾಯಕ, ಇನ್ನಿತರರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next