Advertisement

“ಸಂಸದೀಯ ಕಾರ್ಯದರ್ಶಿ ನೇಮಕ ಉದ್ದೇಶ ಸದ್ಯಕ್ಕಿಲ್ಲ’

10:55 PM Sep 23, 2019 | Lakshmi GovindaRaju |

ಬೆಂಗಳೂರು: “ಸಂಸದೀಯ ಕಾರ್ಯದರ್ಶಿ’ಗಳನ್ನು ನೇಮಕ ಮಾಡುವ ಉದ್ದೇಶ ಸದ್ಯಕ್ಕಿಲ್ಲ ಎಂದು ರಾಜ್ಯ ಸರ್ಕಾರ ಸೋಮವಾರ ಹೈಕೋರ್ಟ್‌ಗೆ ಹೇಳಿದೆ. ವಿವಿಧ ಇಲಾಖೆಗಳಿಗೆ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ ಸರ್ಕಾರದ ಕ್ರಮ ಆಕ್ಷೇಪಿಸಿ ಬೆಂಗಳೂರಿನ ನಿವಾಸಿ ಎಂ.ಬಿ. ಆದಿನಾರಾಯಣ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

Advertisement

ಈ ವೇಳೆ ಸರ್ಕಾರದ ಪರ ವಕೀಲರಾದ ಬಿ.ವಿ. ಕೃಷ್ಣ ವಾದ ಮಂಡಿಸಿ, ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಉದ್ದೇಶ ರಾಜ್ಯ ಸರ್ಕಾರಕ್ಕೆ ಸದ್ಯಕ್ಕಿಲ್ಲ. ಈ ಬಗ್ಗೆ ಅಡ್ವೋಕೇಟ್‌ ಜನರಲ್‌ ಅವರು ಕೋರ್ಟ್‌ ಮುಂದೆ ವಾದ ಮಂಡಿಸಲಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆಯನ್ನು ಅ.18ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next