Advertisement

ರಾಜ್ಯದಲ್ಲಿ ಬಹುಮತ ಸರ್ಕಾರ ಇದೆ, ಮಧ್ಯಂತರ ಚುನಾವಣೆ ಬರಲ್ಲ: ಬಿ.ಎನ್. ಬಚ್ಚೇಗೌಡ

09:41 AM Sep 18, 2019 | Team Udayavani |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಹುಮತದ ಸರ್ಕಾರ ಆಡಳಿತದ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ಬರುವುದಿಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.

Advertisement

ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಂಗ್ರೆಸ್, ಜೆಡಿಎಸ್ ನಾಯಕರು ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುತ್ತದೆಯೆಂದು ನೀಡುತ್ತಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಬಹುಮತದ ಸರ್ಕಾರ ಇದೆ. ಇತಂಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆ ಬರಲು ಹೇಗೆ ಸಾಧ್ಯವೆಂದರು. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ನಾಲ್ಕು ವರ್ಷಗಳ ಅಧಿಕಾರ ಪೂರೈಸಲಿದೆ ಎಂದರು.

ಬರ ಪರಿಹಾರಕ್ಕೆ 10 ಸಾವಿರ ಕೋಟಿ ಕೊಡಿ
ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನೆರೆ ಹಾಗೂ ಬರ ಆವರಿಸಿದ್ದು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರಹಾಹದಿಂದ 38 ಸಾವಿರ ಕೋಟಿ ನಷ್ಟ ಉಂಟಾಗಿದೆ ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಕನಿಷ್ಟ ಪರಿಹಾರ ಕಾರ್ಯಗಳಿಗೆ 10 ಸಾವಿರ ಕೋಟಿ ಬಿಡುಗಡೆ ಮಾಡಬೇಕೆಂದು ಸಂಸದ ಬಿ.ಎನ್.ಬಚ್ಚೇಗೌಡ ಆಗ್ರಹಿಸಿದರು.

ಕೋಟ್೯ನಲ್ಲಿ ಇರುವ ಬಗ್ಗೆ ದಯವಿಟ್ಟು ಕೇಳಬೇಡಿ.
ಇಡಿ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಗ್ಗೆ ಕೇಳಿದ ಪ್ರಶ್ನೆಗೆ ಸಂಸದ ಬಚ್ಚೇಗೌಡ ಪ್ರತಿಕ್ರಿಯೆಗೆ ನಿರಾಕರಿಸಿದರು. ನ್ಯಾಯಾಲಯಗಳಲ್ಲಿರುವ ಪ್ರಕರಣಗಳ ಬಗ್ಗೆ ಏನು ಕೇಳಿ ಎಂದರು. ಸುಪ್ರೀಂಕೋರ್ಟ್ ನಲ್ಲಿ ಅರ್ನಹ ಶಾಸಕರ ಪ್ರಕರಣ ಬಗ್ಗೆಯು ಬಚ್ಚೇಗೌಡ ಪ್ರತಿಕ್ರಿಯೆಗೆ ನಿರಾಕರಿಸಿದರು.

Advertisement

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ ಸೇರಿದಂತೆ ಹಲವಾರು ಪ್ರಮುಖ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next