ಸೂರತ್: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಮತ್ತೊಂದು ಹಿನ್ನಡೆ ಎಂಬಂತೆ ಗುಜರಾತ್ ಹೈಕೋರ್ಟ್ ಮಂಗಳವಾರ (ಮೇ 02) 2019ರ ಮೋದಿ ಉಪನಾಮ ಹೇಳಿಕೆ ಕುರಿತ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದೆ.
ಇದನ್ನೂ ಓದಿ:Karnataka Election: ಮೇ 10 ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧ
ಇತ್ತೀಚೆಗಷ್ಟೇ ರಾಹುಲ್ ಗಾಂಧಿಯ ಮೋದಿ ಉಪನಾಮ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಕಟಿಸುವವರೆಗೆ ಎರಡು ವರ್ಷಗಳ ಶಿಕ್ಷೆಯ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಸೂರತ್ ಕೋರ್ಟ್ ವಜಾಗೊಳಿಸಿತ್ತು.
ರಾಹುಲ್ ಗಾಂಧಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಮೋದಿ ಉಪನಾಮ ಹೇಳಿಕೆಗೆ ಸಂಬಂಧಪಟ್ಟಂತೆ ಮಾರ್ಚ್ 23ರಂದು ಭಾರತೀಯ ಅಪರಾಧ ದಂಡ ಸಂಹಿತೆ ಕಲಂ 499 ಮತ್ತು 500ರ ಪ್ರಕಾರ ದೋಷಿ ಎಂದು ಕೋರ್ಟ್ ತೀರ್ಪು ನೀಡಿತ್ತು.
Related Articles
ಸೂರತ್ ಕೋರ್ಟ್ ನ ಈ ತೀರ್ಪಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಕೋರ್ಟ್ ದೋಷಿ ಎಂದು ತೀರ್ಪು ನೀಡಿ, ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಸೂರತ್ ಕೋರ್ಟ್ ನೀಡಿದ್ದ ಶಿಕ್ಷೆಯ ತೀರ್ಪನ್ನು ಮತ್ತು ದೋಷಾರೋಪಣೆಗೆ ತಡೆ ನೀಡಬೇಕೆಂದು ಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ನಲ್ಲೂ ಹಿನ್ನಡೆಯಾಗಿದ್ದು, ರಾಹುಲ್ ರಾಜಕೀಯ ಭವಿಷ್ಯ ತೂಗುಯ್ಯಾಲೆಯಲ್ಲಿದ್ದಂತಾಗಿದೆ.