Advertisement
ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಹಶೀಲ್ದಾರ್ ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯರಾದ ಸಿ.ಕೆ.ಮಂಜುನಾಥ್, ಕೆ.ಎಂ.ನಾಗರಾಜು, ಸಿ.ಎಂ.ಶಿವಣ್ಣ, ಅಂಬರೀಶ್, ಬ್ಯಾಡಮೂಡ್ಲುಬಸವಣ್ಣ ಸೇರಿದಂತೆ ಇತರರು ಸಂತೇಮರಹಳ್ಳಿ ದಲಿತರ ಜೋಡಿ ಕೊಲೆ ಪ್ರಕರಣ ಏನಾಯಿತು. ಕೊಲೆಯಾದವರ ಕುಟುಂಬದವರಿಗೆ ಯಾವುದೇ ಹುದ್ದೆ ನೀಡಿಲ್ಲ.
Related Articles
Advertisement
ದಲಿತರ ಹಕ್ಕು ದಿನಾಚರಣೆ ಆಚರಣೆ: ಬಿ.ರಾಚಯ್ಯ ಅವರು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ದಲಿತರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ದಲಿತರ ಹಕ್ಕು ದಿನಾಚರಣೆಯನ್ನು ಜಾರಿಗೆ ತಂದಿದ್ದರು. ಅದನ್ನೀಗ ಎಷ್ಟು ಪೊಲೀಸ್ ಠಾಣೆಗಳಲ್ಲಿ ಆಚರಿಸುತ್ತಿದ್ದೀರಿ ಎಂದು ಆಲೂರು ನಾಗೇಂದ್ರ ಪ್ರಶ್ನಿಸಿದರು. ಗ್ರಾಮಗಳಲ್ಲಿ ಪ್ರತಿ ಭಾನುವಾರ ದಲಿತರ ಹಕ್ಕು ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಸರ್ಕಲ್ ಇನ್‌ಪೆಕ್ಟರ್ ಮಂಜುನಾಥ್ ಉತ್ತರಿಸಿದರು.
ಶಾಲೆ ಅಡುಗೆ ಸಹಾಯಕರ ವರ್ಗಾವಣೆ: ಸರ್ಕಾರಿ ಶಾಲೆಗಳಲ್ಲಿ ದಲಿತ ಮಹಿಳೆ ಅಡುಗೆ ಮಾಡುತ್ತಾಳೆ ಎಂಬ ಕಾರಣದಿಂದ ಅವರನ್ನು ಬೇರೆ ಶಾಲೆ ವರ್ಗಾವಣೆ ಮಾಡುತ್ತಾರೆ ಎಂಬ ಪ್ರಶ್ನೆಗೆ, ಈ ಕುರಿತು ತಾಲೂಕಿನಲ್ಲಿ ಯಾವುದೇ ದೂರು ಬಂದಿಲ್ಲ ಎಂದು ದಾಸೋಹ ಅಧಿಕಾರಿ ಸಭೆಗೆ ಉತ್ತರಿಸಿದರು. ದಲಿತ ಮುಖಂಡ ಕೆ.ಎಂ.ನಾಗರಾಜು ಮಾತನಾಡಿ, ಮಸಗಾಪುರ ಶಾಲೆಯ ಅಡುಗೆ ಸಹಾಯಕರನ್ನು ಏಕೆ ವರ್ಗಾವಣೆ ಮಾಡಿದ್ದೀರಿ ಎಂದು ಪ್ರಶ್ನಿಸಿದಾಗ ಅವರನ್ನು ನಗರದ ಶಾಲೆಗೆ ವರ್ಗಾವಣೆ ಮಾಡಲಾಗಿದೆ ಎಂದು ಉತ್ತರ ನೀಡಿದರು. ಈ ಬಗ್ಗೆ ಮುಂದಿನ ಸಭೆಯಲ್ಲಿ ವರದಿ ನೀಡುವಂತೆ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರ್ ಮಹೇಶ್ ಸೂಚಿಸಿದರು.ಬೋರ್‌ವೆಲ್‌ಗೆ ವಿದ್ಯುತ್ ಸಂಪರ್ಕ ನೀಡಿಲ್ಲ: 2016, 17 ಹಾಗೂ 18ನೇ ಸಾಲಿನಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿಯಲ್ಲಿ ಎಸ್‌ಸಿ, ಎಸ್‌ಟಿ ಫಲಾನುಭವಿಗಳಿಗೆ ಕೊರೆಯಲಾದ ಬೋರ್‌ವೆಲ್‌ಗಳಿಗೆ ವಿದ್ಯುತ್ ಸಂಪರ್ಕ ನೀಡಿಲ್ಲ. ತಾ.ಪಂ ಮಾಜಿ ಸದಸ್ಯ ಮಹಾಲಿಂಗು ಇತರರು ಸಭೆ ಗಮನಕ್ಕೆ ತಂದಾಗ ಸೆಸ್ಕ್ ಎಇಇಗಳಾದ ರಾಜು, ದೇವರಾಜಯ್ಯ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ತಾಪಂ ಇಒ ಪ್ರೇಮ್‌ಕುಮಾರ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಿಕ್ಕಬಸವಯ್ಯ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿ.ಎಸ್.ರಾಮಸ್ವಾಮಿ ಹಾಗೂ ಸಮಿತಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್: ಎಸ್‌ಸಿ, ಎಸ್‌ಟಿ ಸಭೆಗೆ ಸರಿಯಾಗಿ ಅಧಿಕಾರಿಗಳು ಹಾಜರಾಗುತ್ತಿಲ್ಲ. ನಿರ್ಲಕ್ಷ್ಯ ತೋರುತ್ತಿದ್ದಾರೆ ಸಭೆ ಗೈರು ಹಾಜರಾದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿತರಕ್ಷಣಾ ಸಮಿತಿ ಸದಸ್ಯರು ಒತ್ತಾಯಿಸಿದಾಗ ತಹಶೀಲ್ದಾರ್ ಮಹೇಶ್, ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲಾಗುವುದು ಎಂದು ಹೇಳಿದರು.