Advertisement
ರವಿವಾರ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂಬ ಕೆಲವರ ಆಗ್ರಹದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿ ಸಿ ಯಾರ್ಯಾರ ಹೆಸರು ಕೇಳಿಬರುತ್ತಿದೆಯೋ ಅವರನ್ನೂ ವಿಚಾರಣೆ ನಡೆಸಬೇಕು. ಅದಕ್ಕಾಗಿಯೇ ನಾವು ಸಿಬಿಐ ವಿಚಾರಣೆ ಆಗ್ರಹಿಸುತ್ತಿದ್ದೇವೆ ಎಂದರು.ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷದ ನಾಯಕ ಆರ್.ಅಶೋಕ್ ಅವರು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ ಎಂದಿದ್ದಾರೆ.