Advertisement

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಬೇಡ

06:50 AM Jun 25, 2020 | Lakshmi GovindaRaj |

ಕೋಲಾರ: ರೈತರನ್ನು ಕೃಷಿಯಿಂದ ಹೊರಗಿಟ್ಟು ಕಾರ್ಪೋರೆಟ್‌ ಕಂಪನಿಗಳಿಗೆ ಉತ್ತೇಜನ ನೀಡಲು ಹೊರಟಿದ್ದು, ಇಂತಹ ಅವೈಜ್ಞಾನಿಕ ಮರಣ ಶಾಸನವನ್ನು ಸರ್ಕಾರಗಳು ವಾಪಸ್‌ ಪಡೆಯಬೇಕು ಎಂದು ರಾಜ್ಯ ರೈತ ಸಂಘ ಅಧ್ಯಕ್ಷ  ಕೋಡಿಹಳ್ಳಿ ಚಂದ್ರಶೇಖರ್‌ ಒತ್ತಾಯಿಸಿದರು ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

Advertisement

ಭೂ ಸ್ವಾಧೀನ ಕಾಯ್ದೆಯ ಮೂಲಕ ಕೃಷಿ ಭೂಮಿಯನ್ನು ಪಡೆದು ವಿದೇಶಿ ಕಂಪನಿಗಳ  ಮೂಲಕ ಕೈಗಾರಿಕೆಗಳ ಸ್ಥಾಪನೆ ಮಾಡಲು ಬೇಕಾದ ಕಾನೂನನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ರೈತರು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಮೊದಲೇ ಸರ್ಕಾರ ಕಾಯ್ದೆ ವಾಪಸ್‌ ಪಡೆಯಬೇಕು ಎಂದು ಮನವಿ  ಮಾಡಿದರು. ಈ ಹಿಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಇದೇ ರೀತಿ ಭೂಸ್ವಾಧೀನ ಕಾಯ್ದೆ ಜಾರಿಗೊಳಿಸಲು ಮುಂದಾದಾಗ ಕೆಲವು ರಾಜ್ಯಗಳು ವಿರೋಧಿಸಿದ್ದವು.

ಈ ವಿಚಾರದಲ್ಲಿ ನಿರ್ಣಯ ಕೈಗೊಳ್ಳುವ ಅಧಿಕಾರವನ್ನು ಆಯಾ  ರಾಜ್ಯ ಸರ್ಕಾರಗಳಿಗೆ ನೀಡಿತ್ತು. ಆದರೆ, ಸದನದಲ್ಲಿ ಚರ್ಚಿಸಿ ಬಹುಮತದಿಂದ ಅಂಗೀಕಾರ ಪಡೆಯದೇ ಏಕಾಏಕಿ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿ ಭಾಗವಾಗಿದೆ ಎಂದರು. ಗೋಷ್ಠಿಯಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ರಾಜ್ಯ ಕಾರ್ಯದರ್ಶಿ ವೀರಭದ್ರಸ್ವಾಮಿ, ಜಿಲ್ಲಾ ಅಧ್ಯಕ್ಷ ರಾಮೇಗೌಡ, ಪ್ರಧಾನ ಕಾರ್ಯದರ್ಶಿ ಮಾಜೇìನಹಳ್ಳಿ ನಾರಾಯಣಸ್ವಾಮಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next