Advertisement
ಪದವಿಯಲ್ಲಿ ಕನ್ನಡ ಕಲಿಕೆ ಕಡ್ಡಾಯ ಗೊಳಿಸಿ ರಾಜ್ಯ ಸರಕಾರ ಹೊರ ಡಿಸಿರುವ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್ ಹಾಗೂ ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸಲ್ಲಿಸಲಾದ ಪ್ರಮಾಣಪತ್ರದಲ್ಲಿ ಈ ಮಾಹಿತಿ ನೀಡಲಾಗಿದೆ. ಈ ಮೂಲಕ ಪದವಿಯಲ್ಲಿ ಕನ್ನಡ ಕಲಿ ಕೆಯನ್ನು ಕಡ್ಡಾಯ ಮಾಡಲು ಹೊರ ಟಿದ್ದ ರಾಜ್ಯಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.
ಸ್ಥಳೀಯ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದ ಮಹತ್ವಾ ಕಾಂಕ್ಷೆ ಹಾಗೂ ಆವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಸುಲಭವಾಗಿ ಸಮಗ್ರ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ ಉದ್ದೇಶ ದಿಂದ ಎನ್‌ಇಪಿ ಜಾರಿಗೊಳಿಸಲಾಗಿದೆ. ಎನ್‌ಇಪಿಯ 22ನೇ ಅಧ್ಯಾಯ ದಲ್ಲಿ ಭಾರತದ ಭಾಷೆಗಳು, ಕಲೆ ಮತ್ತು ಸಂಸ್ಕೃತಿ ಪ್ರಚಾರದ ಬಗ್ಗೆ ಹೇಳಲಾಗಿದೆ. ಇದೇ ಅಧ್ಯಾಯದಲ್ಲಿ ದ್ವಿಭಾಷೆಗೆ ಅವಕಾಶ ವಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳು ಮಾತೃಭಾಷೆ ಅಥವಾ ಸ್ಥಳೀಯ ಭಾಷೆಯನ್ನು ಬೋಧನ ಭಾಷೆಯನ್ನಾಗಿ ಬಳಕೆ ಮಾಡಬಹು ದಾಗಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಅನುಕೂಲಕ್ಕಾಗಿ ಭಿನ್ನ ಬಗೆಯ ಶೈಕ್ಷಣಿಕ ಸಾಫ್ಟ್ವೇರ್‌ಗಳನ್ನು ಅಭಿವೃದ್ಧಿಪಡಿಸಿ ಅದು ಎಲ್ಲರಿಗೂ ದೊರೆಯುವಂತೆ ಮಾಡುವ ಉದ್ದೇಶವನ್ನು ಎನ್‌ಇಪಿಯಲ್ಲಿ ಹೊಂದಲಾಗಿದೆ. ಎನ್‌ಇಪಿ ಮತ್ತದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ. ಹೀಗಾಗಿ, ಎನ್‌ಇಪಿ ನಿಯಮಗಳನ್ನು ಪುನರ್ ವ್ಯಾಖ್ಯಾನಿಸುವ ಅಗತ್ಯ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸರಕಾರ ಪ್ರಮಾಣಪತ್ರದಲ್ಲಿ ಸ್ಪಷ್ಟಪಡಿಸಿದೆ.