Advertisement

ಕಾನೂನು ಕೈಗೆತ್ತಿಕೊಳ್ಳುವ ಗೋರಕ್ಷಕರಿಗಿಲ್ಲ ರಕ್ಷಣೆ

12:59 PM May 06, 2017 | Team Udayavani |

ಬೆಂಗಳೂರು: ಗೋ ರಕ್ಷಣೆ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ಯಾವುದೇ ರೀತಿಯ ರಕ್ಷಣೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ವಿಧಾನಸೌಧದಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, “1964ರ ಗೋಹತ್ಯೆ ರಕ್ಷಣಾ ಕಾಯ್ದೆಯಲ್ಲಿ ಗೋರಕ್ಷಕರಿಗೆ ಯಾವುದೇ ರೀತಿಯಲ್ಲೂ ಬೆಂಬಲ ನೀಡಲಾಗಿಲ್ಲ. ಗೋರಕ್ಷಣೆ ಹೆಸರಿನಲ್ಲಿ ಹಿಂಸೆ ಮಾಡುವ ಗುಂಪುಗಳನ್ನು ನಿಷೇಧಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅದಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿದೆ. ಜಾಗೃತ ಪಡೆಗಳ ಹೆಸರಿನಲ್ಲಿ ಸಾಮಾಜಿಕ ಸಾಮರಸ್ಯ ಕದಡಿದರೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು. ಗೋವು ರಕ್ಷಣೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರನ್ನು ಸರ್ಕಾರ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮಲ್ಟಿಫ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಗರಿಷ್ಠ ಪ್ರದರ್ಶನ ದರವನ್ನು 200 ರೂ.ಗೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಮಲ್ಟಿಫ್ಲೆಕ್ಸ್‌ ಗಳು ನ್ಯಾಯಾಲಯದ ಮೊರೆ ಹೋದರೆ ಸರ್ಕಾರ ತಡೆಯಲು ಸಾಧ್ಯವಿಲ್ಲ. ಒಂದೊಮ್ಮೆ ನ್ಯಾಯಾಲಯದ ಮೆಟ್ಟಿಲೇರಿದರೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯಿಸಿದರು.

ಸಿಎಂ ಪ್ರಗತಿ ಪರಿಶೀಲನೆ ಇಂದು
ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ. ವಿವಿಧ ಇಲಾಖೆಗಳು ಕೈಗೊಂಡಿರುವ ಅಭಿವೃದ್ಧಿ
ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿ ಕುರಿತು ಮುಖ್ಯಮಂತ್ರಿ ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆ.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ನಗರಾಭಿವೃದ್ಧಿ, ಕಂದಾಯ, ಯೋಜನೆ, ಕೃಷಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಹಾರ, ವಸತಿ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಯಲಿದೆ. ಕೆರೆ ಸಂಜೀವಿನಿ, ಸ್ವತ್ಛ ಭಾರತ್‌, ಪ್ರಧಾನಮಂತ್ರಿ ಗ್ರಾಮ
ಸಡಕ್‌ ಯೋಜನೆ, ನಗರೋತ್ಥಾನ, ಹೈದರಾಬಾದ್‌-ಕರ್ನಾಟಕ ಪ್ರದೇಶಾಭಿ ವೃದ್ಧಿ, ನರೇಗಾ, ಪಡಿತರ ಚೀಟಿ ವಿತರಣೆ ಮತ್ತಿತರ ಯೋಜನೆಗಳ ‌ ಪ್ರಗತಿ ಕುರಿತು ಮುಖ್ಯಮಂತ್ರಿಯವರು ಮಾಹಿತಿ ಪಡೆಯಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next