Advertisement
ಕೇಂದ್ರ ಸರ್ಕಾರ ಅಗತ್ಯ ವಿದ್ಯುತ್ ಪೂರೈಸಲು ಸಿದ್ಧವಿದ್ದರೂ ರಾಜ್ಯ ಸರ್ಕಾರ ಅದನ್ನು ಪಡೆದುಕೊಳ್ಳಲು ಮುಂದಾಗದೆ ಅನಿಯಮಿತ ಲೋಡ್‌ಶೆಡಿಂಗ್ ಮಾಡಲಾಗುತ್ತಿದೆ ಎಂಬ ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಪ್ರತಿಕ್ರಿಯೆ ನೀಡಿದರು.
ರಾಜ್ಯದ ಬಳ್ಳಾರಿ ಮತ್ತು ಯರಮರಸ್‌ನ ತಲಾ 800 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಒಡಿಷಾದ ಘೋಗ್ರಪಲ್ಲಿಯಿಂದ ಕಲ್ಲಿದ್ದಲು ಪೂರೈಕೆಯಾಗುತ್ತಿದ್ದು, 2018ರ ಮೇ 31ರ ನಂತರ ಕಲ್ಲಿದ್ದಲು ಪೂರೈಕೆ ಸ್ಥಗಿತಗೊಳಿಸಲಾಗುವುದು. ಹೀಗಾಗಿ ಈ ಘಟಕಗಳಿಗೆ ಕಲ್ಲಿದ್ದಲು ಬೇಕಾದಲ್ಲಿ ಕೇಂದ್ರ ಸರ್ಕಾರದ ಶಕ್ತಿ ಸ್ಕೀಂನಡಿ ಪ್ರಸ್ತಾವನೆ ಸಲ್ಲಿಸಿ ಎಂದು ಕೇಂದ್ರ ಸರ್ಕಾರದಿಂದ ಪತ್ರ ಬಂದಿತ್ತು. ಇದರಿಂದ ಈ ಘಟಕಗಳಿಗೆ ಕಲ್ಲಿದ್ದಲು ಸಮಸ್ಯೆ ಉಂಟಾಗುವ ಸಂಭವವಿತ್ತು. ಈ ಬಗ್ಗೆ ಕೇಂದ್ರ ಇಂಧನ ಸಚಿವರಲ್ಲಿ ಮಾತುಕತೆ ನಡೆಸಿದ್ದು, ಅವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಪ್ರಕಾಶ್ ಜಾವಡೇಕರ್ ಅವರು ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುವುದನ್ನು ಕೈಬಿಟ್ಟು ಸಮರ್ಪಕ ಕಲ್ಲಿದ್ದಲು ಪೂರೈಸುವಂತೆ ಕೇಂದ್ರ ಸರ್ಕಾರದ ಮನವೊಲಿಸಲಿ ಎಂದು ಸಲಹೆ ಮಾಡಿದರು.