Advertisement
ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾವಿಸಿ, ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ ಕುಂಠಿತವಾಗುತ್ತಿದೆ. ತಾಂತ್ರಿಕ ಅಡಚಣೆ ನೆಪದಲ್ಲಿ ಅಧಿಕಾರಿಗಳು ವಿದ್ಯುತ್ ಕಡಿತ ಮಾಡುತ್ತಿದ್ದಾರೆ.. ಪರಿಸ್ಥಿತಿ ಹೀಗಾದರೆ, ಮುಂದಿನ ಬೇಸಗೆಯಲ್ಲಿ ವಿದ್ಯುತ್ ಸಮಸ್ಯೆ ಮತ್ತಷ್ಟು ತೀವ್ರಗೊಳ್ಳಲಿದೆ ಎಂದರು.
ಅದಕ್ಕೆ ಉತ್ತರಿಸಿದ ಸಚಿವರು, ಆರಂಭದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು ನಿಜ. ತತ್‌ಕ್ಷಣವೇ ನಾನು ದಿಲ್ಲಿಗೆ ಹೋಗಿ ಕೇಂದ್ರ ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಮುಖ್ಯಮಂತ್ರಿ ಇದನ್ನು ಗಂಭೀರವಾಗಿ ಪರಿಗಣಿಸಿ ನೆರವಿಗೆ ಬಂದರು. ಎಲ್ಲ ರೀತಿಯ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡ ಕಾರಣ ಕೊರತೆ ನಿವಾರಣೆಯಾಗಿದೆ ಎಂದರು. ಇದನ್ನೂ ಓದಿ:ಸಚಿವ ರಾಮುಲು ಅವರೊಂದಿಗೆ ಖಾಸಗಿ ಬಸ್ ಮಾಲಕರ ಒಕ್ಕೂಟದ ಸಭೆ
Related Articles
ಸದ್ಯಕ್ಕೆ ವೈಟಿಪಿಎಸ್, ಆರ್‌ಟಿಪಿಎಸ್ ಹಾಗೂ ಬಿಟಿಪಿಎಸ್‌ನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಲ್ಲಿದ್ದಲು ಸಂಗ್ರಹವಿದೆ. ಮುಂದಿನ ದಿನಗಳಲ್ಲಿ ಯಾವುದೇ ಕೊರತೆ ಆಗುವುದಿಲ್ಲ. ವಿದ್ಯುತ್ ಉತ್ಪಾದನೆ ಕೂಡಾ ಆಗುತ್ತಿದೆ. ಬೇಸಗೆಯಲ್ಲಿ ಸಮಸ್ಯೆ ಆಗಲಿಕ್ಕಿಲ್ಲ. ಲೋಡ್ ಶೆಡ್ಡಿಂಗ್ ಚಿಂತನೆ ಇಲ್ಲ. ರೈತರಿಗೆ ಏಳು ಗಂಟೆ ವಿದ್ಯುತ್ ನೀಡಲು ತಾಂತ್ರಿಕ ಸಮಸ್ಯೆ ಇದ್ದರೆ ಅದನ್ನು ಬಗೆಹರಿಸಲಾಗುವುದು ಎಂದು ಸಚಿವರು ತಿಳಿಸಿದರು.
Advertisement