ಬೆಂಗಳೂರು: ಬೆಂಗಳೂರಿನಲ್ಲಿ ಯಾವುದೇ ಲಾಕ್‌ಡೌನ್ ಇರೋದಿಲ್ಲ ಎಂದು ಸಚಿವ ಆರ್. ಅಶೋಕ್ ಹೇಳಿದರು.
ಮುಖ್ಯಮಂತ್ರಿಗಳ ಸಭೆ ಬಳಿಕ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ಕ್ವಾರಂಟೈನ್ ಕಡ್ಡಾಯ. ಚೆನ್ನೈ, ದೆಹಲಿಯಿಂದ ಬಂದವರಿಗೆ ಕ್ವಾರೆಂಟೈನ್ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ನಗರದಲ್ಲಿ 100 ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಎರಡು ವಾರ್ಡ್‌ಗೆ ಒಂದು ಆಂಬುಲೆನ್ಸ್ ವ್ಯವಸ್ಥೆ ಮಾಡಿ, 5000 ಬೆಡ್ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದೆ. ಬೆಡ್ ವ್ಯವಸ್ಥೆ ಬಗ್ಗೆ ಮಾಹಿತಿಗಾಗಿ ತುಷಾರ್ ಗಿರಿನಾಥ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ಹೇಳಿದರು.
ಶೇ. 61% ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. 3700 ಕೋವಿಡ್ ಪಾಸಿಟಿವ್ ರೋಗಿಗಳು ಮಾತ್ರ ಸದ್ಯ ಇದ್ದಾರೆ. ಬೆಂಗಳೂರಿನ ಎಲ್ಲ ಪಕ್ಷದ ಶಾಸಕರು, ಸಂಸದರ ಸಭೆ ನಡೆಯಲಿದೆ. ಸರ್ವ ಪಕ್ಷದ ಸಲಹೆ ಪಡೆದು ಮುಂದುವರಿಯುತ್ತೇವೆ ಎಂದು ಹೇಳಿದರು.
ಕೋವಿಡ್-19 ಹೆಚ್ಚಿರುವ ವಾರ್ಡ್‌ಗಳಲ್ಲಿ ಸೀಲ್‌ಡೌನ್ ಮುಂದುವರಿಯುತ್ತದೆ. ಲಾಕ್‌ಡೌನ್ ಮಾಡುವಂತೆ ಶ್ರೀಮಂತ ವರ್ಗ ಬೇಡಿಕೆ ಇಟ್ಟಿದೆ. ಕೂಲಿ ಕಾರ್ಮಿಕರು ಲಾಕ್‌ಡೌನ್ ಬೇಡ ಎಂದಿದ್ದಾರೆ. ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನ ಮಾಡಬೇಕಾಗುತ್ತದೆ ಎಂದು ತಿಳಿಸಿದರು.