ಶಿವಮೊಗ್ಗ: ಜಿಲ್ಲೆಯಲ್ಲಿ ಇಂದಿನಿಂದ ಲಾಕ್ ಡೌನ್ ತೆರವುಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ ಮಧ್ಯಾಹ್ನ 2 ಗಂಟೆಯ ಬಳಿಕ ಲಾಕ್ ಡೌನ್ ಹೇರಲಾಗಿತ್ತು. ಆದರೆ ಇಂದಿನಿಂದ ಲಾಕ್ ಡೌನ್ ನನ್ನು ತೆರವುಗೊಳಿಸಿರುವುದಾಗಿ ಈಶ್ವರಪ್ಪ ಮಾಹಿತಿ ನೀಡಿದ್ದಾರೆ.
ಆದರೆ ಹಳೇ ಶಿವಮೊಗ್ಗ ಭಾಗದಲ್ಲಿ ಕೋವಿಡ್ ಸೊಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಆ ಪ್ರದೇಶದಲ್ಲಿ ಮಾತ್ರ ಲಾಕ್ ಡೌನ್ ಮುಂದುವರೆಸಲಾಗುವುದು ಎಂದಿದ್ದಾರೆ. ಶಿವಮೊಗ್ಗ ಬೆಕ್ಕಿನಕಲ್ಮಠದಿಂದ ಅಮೀರ್ ಅಹಮದ್ ವೃತ್ತ, ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಎನ್.ಟಿ.ರಸ್ತೆ, ತುಂಗಾ ಹೊಸ ಸೇತುವೆ ಪ್ರದೇಶಗಳು ಸೀಲ್ ಡೌನ್ ಆಗಿರಲಿವೆ.
ಮಾತ್ರವಲ್ಲದೆ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 22, 23, 29 ಹಾಗೂ 30 ನೇ ವಾರ್ಡ್ ನ ಪ್ರದೇಶಗಳು ಕೂಡ ಸೀಲ್ ಡೌನ್ ಆಗಲಿದ್ದು. ವಾರ್ಡ್ ನಂಬರ್ 12, 13 ಹಾಗೂ 33 ರಲ್ಲಿ ಭಾಗಶಃ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದಿದ್ದಾರೆ.
ಹಳೆ ಶಿವಮೊಗ್ಗ ಭಾಗದಲ್ಲಿ ಕೋವಿಡ್ ಸೋಂಕು ಪತ್ತೆಗಾಗಿ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಲಾಗುವುದು. ಇದಕ್ಕಾಗಿ ವೈದ್ಯರನ್ನೊಳಗೊಂಡ ತಂಡ ರಚನೆ ಮಾಡಲಾಗಿದೆ ಎಂದ ಈಶ್ವರಪ್ಪ ಮಾಹಿತಿ ನೀಡಿದ್ದಾರೆ.