ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಅಥವಾ ಕರ್ಪ್ಯೂ ಜಾರಿ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟ ಪಡಿಸಿದೆ.
ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕೋವಿಡ್ ಸೋಂಕು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಸದ್ಯ ಲಸಿಕೆಯನ್ನ ಹೆಚ್ಚಿಗೆ ಮಾಡುತ್ತೆವೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ20/. ರಷ್ಟು ಬೆಡ್ ಮೀಸಲಿಡಲು ಸೂಚಿಸಿದ್ದೇವೆ ಎಂದರು.
ಇದನ್ನೂ ಓದಿ:ಆರ್ಥಿಕತೆಗೆ ಕೊಳ್ಳಿ ಇಡಲಿದೆ 2ನೇ ಲಾಕ್ ಡೌನ್!
ಬೆಂಗಳೂರಿನಲ್ಲಿ15 ದಿನಗಳ ಮಟ್ಟಿಗೆ 6 ರಿಂದ 9ನೇ ತರಗತಿಗಳು ಸ್ಥಗಿತಗೊಳಿಸಲಾಗಿದೆ. ನಂತರದ ದಿನಗಳಲ್ಲಿ ಪರಿಸ್ಥಿತಿಯನ್ನು ನೋಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಸಿಎಂ ಮನವಿ: ಕೋವಿಡ್ ಅಪಾಯವನ್ನು ನಿರ್ಲಕ್ಷ್ಯ ಮಾಡಬೇಡಿ! ರಸ್ತೆಯಲ್ಲಿ ಸಂಚರಿಸುವಾಗಲೂ ಮುನ್ನೆಚ್ಚರಿಕೆ ನಿಯಮಗಳನ್ನು ಪಾಲಿಸಿ, ಮಾಸ್ಕ್ ಅನ್ನು ಸರಿಯಾಗಿ ಧರಿಸಿ, ಭೌತಿಕ ಅಂತರ ಕಾಯ್ದುಕೊಳ್ಳಿ, ಕೊರೋನಾ ನಿಯಂತ್ರಣಕ್ಕೆ ಸಹಕರಿಸಿ. ಇದು ನಿಮ್ಮ, ನಿಮ್ಮ ಕುಟುಂಬದ ಮತ್ತು ಸಮಾಜದ ಸುರಕ್ಷತೆಗೆ ಅತ್ಯಗತ್ಯ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಕೋವಿಡ್ ಹೆಚ್ಚಳ: ಪುಣೆಯಲ್ಲಿ ಹೋಟೆಲ್, ಬಾರ್, ಸಿನಿಮಾ ಮಂದಿರ ಒಂದು ವಾರ ಬಂದ್