Advertisement
ಬಿಎಸ್‌ಪಿ, ಆಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಎಸ್‌ಪಿ, ಡಿಎಂಕೆ, ಶಿವಸೇನೆ ಸೇರಿದಂತೆ ಪ್ರಮುಖ ಪಕ್ಷಗಳ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳ ಲಿಲ್ಲ. ಎನ್‌ಸಿಪಿ, ಸಿಪಿಐ, ಸಿಪಿಎಂ, ಜೆಎಂಎಂ, ಎಲ್‌ಜೆಡಿ, ಆರ್‌ಎಲ್‌ಎಸ್‌ಪಿ, ಆರ್‌ಜೆಡಿ, ಎನ್‌ಸಿ ಸೇರಿ 20 ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
Related Articles
Advertisement
ಜಾಮಿಯಾ ವಿಸಿಗೆ ಮುತ್ತಿಗೆ: ಡಿ.15ರ ಹಿಂಸಾಚಾರಕ್ಕೆ ಸಂಬಂಧಿಸಿ ದಿಲ್ಲಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ಜಾಮಿಯಾ ಮಿಲಿಯಾ ಇಸ್ಲಾ ಮಿಯಾ ಕುಲಪತಿ ನಜ್ಮಾ ಅಖ್ತರ್ ಕಚೇರಿಗೆ ವಿದ್ಯಾರ್ಥಿಗಳು ಸೋಮವಾರ ಮುತ್ತಿಗೆ ಹಾಕಿ, ಪ್ರತಿಭಟಿಸಿದ್ದಾರೆ. ಕೊನೆಗೆ, ಎಫ್ಐಆರ್ ದಾಖಲಿಸುವ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ನಜ್ಮಾ ಭರವಸೆ ನೀಡಿದ್ದಾರೆ.
ನಾಯಕರ ಹಗುರ ಮಾತುಗಳು: ಉತ್ತರಪ್ರದೇಶದ ಅಲಿಗಡದಲ್ಲಿ ಸಿಎಎ ಪರ ನಡೆದ ರ್ಯಾಲಿ ವೇಳೆ ಬಿಜೆಪಿ ನಾಯಕ ರಘುರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ಪ್ರಧಾನಿ ಮೋದಿ ಹಾಗೂ ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗುವವರನ್ನು ಜೀವಂತವಾಗಿ ಹೂತು ಹಾಕುತ್ತೇವೆ’ ಎಂದು ಸಿಂಗ್ ಹೇಳಿರುವುದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನೊಂದೆಡೆ, ಪಶ್ಚಿಮ ಬಂಗಾಲ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಕೂಡ ಇಂಥದ್ದೇ ಹೇಳಿಕೆಯ ಮೂಲಕ ವಿವಾದ ಸೃಷ್ಟಿಸಿದ್ದಾರೆ. “ಸಿಎಎ ವಿರುದ್ಧ ಪ್ರತಿಭಟನೆ ನಡೆಸುವವರನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಾಯಿಗಳಿಗೆ ಗುಂಡಿಕ್ಕಿದಂತೆ ಗುಂಡಿಕ್ಕಲಾಗುತ್ತದೆ’ ಎಂದಿದ್ದಾರೆ. ಈ ಹೇಳಿಕೆಗೆ ಸ್ವತಃ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎನ್‌ಆರ್‌ಸಿ ಅನಗತ್ಯ ಎಂದ ನಿತೀಶ್: ಎನ್‌ಆರ್‌ಸಿಯನ್ನು ದೇಶಾದ್ಯಂತ ಜಾರಿ ಮಾಡುವುದು ಅನಗತ್ಯ ಹಾಗೂ ಅಸಮರ್ಥನೀಯ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. ರಾಜ್ಯ ಅಸೆಂಬ್ಲಿಯಲ್ಲೇ ಅವರು ಈ ಮಾತುಗಳನ್ನಾಡಿದ್ದು, ಎನ್‌ಆರ್‌ಸಿ ಎನ್ನುವುದು ಅಸ್ಸಾಂಗೆ ಮಾತ್ರ ಸೀಮಿತ. ಅದನ್ನು ದೇಶಾದ್ಯಂತ ಅನುಷ್ಠಾನ ಮಾಡುವ ಅಗತ್ಯವೇ ಇಲ್ಲ ಎಂದಿದ್ದಾರೆ.
ಬಿಜೆಪಿ ನಾಯಕನ ಮೇಲೆ ಹಲ್ಲೆಕೇರಳ ಬಿಜೆಪಿ ಘಟಕದ ಕಾರ್ಯದರ್ಶಿ ಎ.ಕೆ.ನಜೀರ್ ಅವರ ಮೇಲೆ ಮಸೀದಿಯೊಳಗೇ ಪ್ರವೇಶಿಸಿ ಹಲ್ಲೆ ನಡೆಸಲಾಗಿದೆ. ಅವರು ಸಿಎಎ ಪರ ರ್ಯಾಲಿಯಲ್ಲಿ ಪಾಲ್ಗೊಂಡು ವಾಪಸಾದ ಸ್ವಲ್ಪ ಹೊತ್ತಲ್ಲೇ ಇಡುಕ್ಕಿ ಜಿಲ್ಲೆ ಯಲ್ಲಿ ಈ ಘಟನೆ ನಡೆದಿದೆ. ಇದು ಎಸ್‌ಡಿಪಿಐ ಹಾಗೂ ಡಿವೈಎಫ್ಐ ಕಾರ್ಯಕರ್ತರ ಕೃತ್ಯ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಮಸೀದಿಯೊಳಗೆ ದಾಳಿ ನಡೆದಿರುವ ಕಾರಣ ಘಟನೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಪೌರತ್ವ ಕಾಯ್ದೆ ವಿರುದ್ಧ ವಿಪಕ್ಷಗಳ ನಿರ್ಣಯವು ಪಾಕಿಸ್ಥಾನಕ್ಕೆ ಖುಷಿ ತಂದಿರಬಹುದು. ವಾಸ್ತವದಲ್ಲಿ ಈ ಕಾನೂನು ಪಾಕಿಸ್ಥಾನ ತನ್ನ ದೇಶದಲ್ಲಿನ ಅಲ್ಪಸಂಖ್ಯಾತರನ್ನು ಹೇಗೆ ಕ್ರೂರವಾಗಿ ನಡೆಸಿಕೊಳ್ಳುತ್ತಿದೆ ಎಂಬುದನ್ನು ಬಯಲು ಮಾಡುವಂಥದ್ದು.
— ರವಿಶಂಕರ್ ಪ್ರಸಾದ್, ಕೇಂದ್ರ ಸಚಿವ