Advertisement
ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ರಾಜ್ಯಾದ್ಯಂತ ಪಾದಯಾತ್ರೆ ನಡೆದಿದೆ. ಆಗಸ್ಟ್ 9 ರಂದು ನಗರದ ಕಾಂಗ್ರೆಸ್ ಭವನದಲ್ಲಿ ಸಮಾರೋಪ ಸಮಾವೇಶ ಮಾಡಲಾಗುವುದು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
Related Articles
Advertisement
ಹೈಕಮಾಂಡ್ ನಾಯಕರ ಜತೆ ಮುಂದಿನ ಚುನಾವಣೆ ಬಗ್ಗೆ ಚರ್ಚೆ ನಡೆದಿದೆ. ಸಿದ್ದರಾಮಯ್ಯ ಪ್ರಭಾವಿ ಹಾಗೂ ಜನಪರ ನಾಯಕರೂ ಹೌದು, ಹೀಗಾಗಿ ಕಾರ್ಯಕ್ರಮಕ್ಕೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ, ಇದರಲ್ಲಿ ಶೇ 90 ರಷ್ಟು ಸಿದ್ದರಾಮಯ್ಯನವರ ಅಭಿಮಾನಿಗಳು ಭಾಗಿಯಾಗಿದ್ದರು ಎಂದರು.
ಯಮಕನಮರಡಿ ಕ್ಷೇತ್ರದಲ್ಲಿ ಸಚಿವ ಉಮೇಶ ಕತ್ತಿ, ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಅವರಿಗೆ ಬಿಜೆಪಿ ಉಸ್ತುವಾರಿ ಕೊಟ್ಟಿರುವ ಕುರಿತು ಪ್ರತಿಕ್ರಿಯಿಸಿದ ಅವರು, ವಿಧಾನ ಸಭಾ ಚುನಾವಣೆ ಇನ್ನೂ 7-8 ತಿಂಗಳು ಬಾಕಿ ಇದೆ. ಯಮಕನಮರಡಿ ಕ್ಷೇತ್ರದ ಮೇಲೆ ಬಿಜೆಪಿ ಹದ್ದಿನ ಕಣ್ಣಿದೆ. ಫೈಟ್ ಮಾಡಲಿ ನಾವು ಸಜ್ಜಾಗಿದ್ದೆವೆ ಎಂದು ತಿರುಗೇಟು ನೀಡಿದರು.
ಫಿರೋಜ್ ಸೇಠ್ ನಡುವಿನ ವೈಮನಸ್ಸಿನ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಅಸಮಾಧಾನ ಸರ್ವೇ ಸಾಮಾನ್ಯ ಚುನಾವಣೆ ಬರಲಿ, ಇವಾಗ ಹೇಳಿಕೆ ನೀಡುವುದು ಸರಿಯಲ್ಲ ಎಂದರು. ಬೆಲೆ ಏರಿಕೆ ಬಗ್ಗೆ ಬಿಜೆಪಿಗರು ಮಾತು ಕೇಳುತ್ತಿಲ್ಲ. ಚಿರತೆ ಮಾತನ್ನಾದರೂ ಕೇಳುತ್ತಾರೆ ಎಂದು ಲೇವಡಿ ಮಾಡಿದರು.