Advertisement
ರಾಜ್ಯ ಮೀಸಲು ಪಡೆ (ಕೆಎಸ್‌ಆರ್‌ಪಿ)ಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಐಕ್ಯತೆ ಮತ್ತುದೈಹಿಕ ಸದೃಢತೆಗಾಗಿ ಸ್ವಾತಂತ್ರ್ಯ ಓಟ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬೆಂಕಿ ಹಚ್ಚಿದ ಪ್ರಕರಣದಲ್ಲಿ 24 ಗಂಟೆಯೊಳಗೆ ಆರೋಪಿಗಳನ್ನುಬಂಧಿಸಿರುವುದು ರಾಜ್ಯ ಪೊಲೀಸರು ದಕ್ಷತೆಯಿಂದ ಕೆಲಸ ಮಾಡುವುದನ್ನು ತೋರಿಸುತ್ತದೆ. ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಿಸಿ ಟಿವಿ ದೃಶ್ಯಾವಳಿಗಳನ್ನು ಹೊರತುಪಡಿಸಿ ಆರೋಪಿಗಳ ಬಗ್ಗೆ ಪೊಲೀಸರಿಗೆ ಯಾವುದೇ ಸುಳಿವು ದೊರೆತಿರಲಿಲ್ಲ. ಆದರೂ, ಸಣ್ಣ ಸುಳಿವಿಡಿದು ಇಡೀ ಪ್ರಕರಣ ಬೇದಿಸಿದ್ದಾರೆ. ಇದರಿಂದ ಯಾರೇ ಅಪರಾಧ ಕೃತ್ಯದಲ್ಲಿ ತೊಡಗಿಸಿಕೊಂಡು ಎಲ್ಲೇ ಅಡಗಿ ಕುಳಿತರು ಮಟ್ಟ ಹಾಕದೇ ಬಿಡುವುದಿಲ್ಲ. ಅವರ ಹೆಡಮುರಿ ಕಟ್ಟುವುದು ನಿಶ್ಚಿತ ಎಂಬ ಸಂದೇಶ ನೀಡಲಾಗಿದೆ ಎಂದು ಹೇಳಿದರು.
Related Articles
Advertisement
ಆಫ್ರಿಕನ್ ಪ್ರಜೆಗಳ ಗಡಿಪಾರಿಗೆ ಕಾನೂನು ತೊಡಕು: ರಾಜ್ಯದಲ್ಲಿ ಆಫ್ರಿಕನ್ ಪ್ರಜೆಗಳ ಹಾವಳಿ ಹೆಚ್ಚಾಗಿದೆ. ವೀಸಾ, ಪಾಸ್‌ಪೋರ್ಟ್ ಅವಧಿ ಮುಗಿದಿದ್ದರೂ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕಾನೂನು ಬಾಹಿರವಾಗಿ ಹಲವಾರು ಆಫ್ರಿಕನ್ ಪ್ರಜೆಗಳು ಬೆಂಗಳೂರು ಸೇರಿದಂತೆ ನಾನಾ ಕಡೆಗಳಲ್ಲಿ ವಾಸವಾಗಿದ್ದಾರೆ. ಇಂತಹವರನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆದರೆ, ಗಡಿಪಾರು ಮಾಡಲು ಕೆಲವು ಕಾನೂನು ತೊಡಕು ಉಂಟಾಗಿರುವುದರಿಂದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿ ನಡೆಸಲಾಗುತ್ತಿದೆ. ಶೀಘ್ರದಲ್ಲೇಈ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೆಎಸ್‌ಆರ್‌ಪಿ ಸಿಬ್ಬಂದಿಗೆ ಸಿವಿಲ್ ಸೇವೆಯಲ್ಲಿ ಅವಕಾಶ: ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮಾತನಾಡಿ, ಮುಂದಿನದಿನಗಳಲ್ಲಿ ಪೊಲೀಸರ ನೇಮಕಾತಿಯಲ್ಲಿ ಕ್ರೀಡಾ ವಿಭಾಗಕ್ಕೆ ಶೇ.2ರಷ್ಟು ಕೋಟಾ ನೀಡಲಾಗುವುದು. ಜತೆಗೆ, ಕೆಎಸ್‌ಆರ್‌ಪಿ ಸಿಬ್ಬಂದಿಗೆ ಸಿವಿಲ್ ಸೇವೆಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ಈ ಸಂಬಂಧ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು. ಕ್ರೀಡಾ ಕೋಟಾದಲ್ಲೂ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ನಡೆಯಲಿದೆ. ಸ್ಪೋರ್ಟ್ಸ್ ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಕೇಳಿಬಂದಿತ್ತು.ಈಗ ಶೇ.2ರಷ್ಟು ನೇಮಕಾತಿಯನ್ನು ನ್ಪೋರ್ಟ್ಸ್ ಕೋಟಾದಡಿ ಮಾಡುವಂತೆ ಕಾನೂನು ತರಲಾಗುತ್ತಿದೆ. ಇದು ಗೃಹ ಸಚಿವಾಲಯದ ಮಹತ್ವದ ನಿರ್ಧಾರವಾಗಿದೆ.10 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾ ಕೋಟಾದಡಿಯಲ್ಲಿ ಪೊಲೀಸ್ ನೇಮಕಾತಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು. ಶೇ.10 ಮೀಸಲಾತಿಯಲ್ಲಿ, ಶೇ 2ರಷ್ಟು ಕ್ರೀಡಾ ಕೋಟಾ ಆಗಿರಲಿದೆ. ಈಗಾಗಲೇ ಇಲಾಖೆಯು ಎಲ್ಲ ಸಿದ್ಧತೆ ನಡೆಸಿದೆ ಎಂದು ತಿಳಿಸಿದರು. 250 ಮಂದಿ ಪೊಲೀಸರು ಭಾಗಿ: ಕೋವಿಡ್ ಸೋಂಕು ತಡೆಗಟ್ಟಲು ಸಾರ್ವಜನಿಕರು ಲಸಿಕೆ ಪಡೆಯುವ ಬಗ್ಗೆ, ಸಾಮಾಜಿಕ ಮತ್ತು ಪರಿಸರ ಕಾಳಜಿ, ಮಾನಸಿಕ ಮತ್ತು ದೈಹಿಕ ಸದೃಢತೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೆಎಸ್‌ಆರ್‌ಪಿ ಯಿಂದ ಐಕ್ಯತೆ-ದೈಹಿಕ ಸದೃಢತೆಗಾಗಿ ಸ್ವಾತಂತ್ರ್ಯದ ಓಟ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ನಡೆದ ಓಟದಲ್ಲಿಕೆಎಸ್‌ಆರ್‌ಪಿ ಘಟಕದ ಎಡಿಜಿಪಿಯಿಂದ ಪೊಲೀಸ್ ಪೇದೆಯವರೆಗೆ 250 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ವಿಧಾನಸೌಧ ಮೆಟ್ರೊ ನಿಲ್ದಾಣದಿಂದ ಹಮ್ಮಿಕೊಂಡಿದ್ದ 10 ಕಿ.ಮಿ. ಓಟಕ್ಕೆ ಸಿಐಡಿ ಡಿಜಿಪಿ ಪವನ್ ಜೀತ್ ಸಿಂಗ್ ಸಂಧು ಚಾಲನೆ ನೀಡಿದರು.