Advertisement

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ: ಪರಮೇಶ್ವರ್‌

01:35 AM Jun 28, 2019 | Sriram |

ಬೆಂಗಳೂರು: ‘ರಾಜ್ಯದಲ್ಲಿ ಆಪರೇಷನ್‌ಗಳು ನಡೆಯುತ್ತಲೇ ಇರುತ್ತವೆ. ಆದರೆ, ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ಕೆಲವರು ವೈಯಕ್ತಿಕ ಹೇಳಿಕೆ ನೀಡುತ್ತಿದ್ದಾರೆ. ಅದು ಸರ್ಕಾರ ಮತ್ತು ಪಕ್ಷದ ಮಾತಲ್ಲ. ನಾವು ಜನರಿಗೆ ಕೊಟ್ಟ ಭರವಸೆ ಮೇಲೆ ಸರ್ಕಾರ ನಡೆಸುತ್ತಿದ್ದೇವೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಿಂದಲೇ ಸೋಲಾಯಿತು ಎಂದು ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅವರ ಅಭಿಪ್ರಾಯಗಳನ್ನು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗಮನಕ್ಕೆ ತರುತ್ತಾರೆ ಎಂದರು.

ಪಕ್ಷದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಪಾರದರ್ಶಕವಾಗಿ ಮಾಡಲು ತೀರ್ಮಾನಿಸಲಾಗಿದೆ. ಈ ಆಯ್ಕೆಯ ಮೇಲೆ ಹೈ ಕಮಾಂಡ್‌ ಹದ್ದಿನ ಕಣ್ಣಿಡಲಿದೆ. ಕನಿಷ್ಠ 10 ವರ್ಷ ಪಕ್ಷ ಸಂಘಟಿಸಿದವರಿಗೆ ಅವಕಾಶ ಕಲ್ಪಿಸಲಾಗುವುದು. ಪ್ರಾಮಾಣಿಕವಾಗಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯಲ್ಲಿ ಲಾಬಿಗೆ ಅವಕಾಶವಿಲ್ಲ. ಎಐಸಿಸಿ ಕಾರ್ಯ ದರ್ಶಿಗಳು ಆಯ್ಕೆ ಮಾಡಲಿದ್ದಾರೆ. ನಾಲ್ಕು ಕಂದಾಯ ವಿಭಾಗಗಳಿಂದ ಪ್ರತ್ಯೇಕ ಆಯ್ಕೆ ಮಾಡಲಾಗುತ್ತದೆ. ಪದಾಧಿಕಾರಿಗಳ ಸಂಖ್ಯೆಯನ್ನು ನೂರಕ್ಕೆ ಇಳಿಸಲು ತೀರ್ಮಾನಿಸಲಾಗಿದ್ದು, 50 ವರ್ಷ ಮೀರದವರಿಗೆ ಆದ್ಯತೆ ನೀಡಲಾಗುವುದು ಎಂದು ಪರಮೇಶ್ವರ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next