Advertisement

ಮಧ್ಯಂತರ ಚುನಾವಣೆ ಇಲ್ಲ: ಸಿದ್ದರಾಮಯ್ಯ

07:09 AM Jun 25, 2019 | Team Udayavani |

ಮೈಸೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅವಧಿ ಪೂರೈಸಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎರಡೂ ಪಕ್ಷಗಳು ಸೇರಿ  ಸಮ್ಮಿಶ್ರ ಸರ್ಕಾರ ನಡೆಸುತ್ತಿರುವಾಗ ವಿಧಾನಸಭೆಗೆ ಮಧ್ಯಂತರ ಚುನಾವಣೆ ಎದುರಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದಲ್ಲದೆ, ಮಧ್ಯಂತರ ಚುನಾವಣೆನೂ ಇಲ್ಲ, ಸರ್ಕಾರಕ್ಕೂ ಏನು ಆಗಲ್ಲ ಎಂದರು.

Advertisement

ಪಕ್ಷ ಸಂಘಟನೆಗಾಗಿ ಕಾಂಗ್ರೆಸ್‌ ಹೈಕಮಾಂಡ್‌, ಪ್ರದೇಶ ಕಾಂಗ್ರೆಸ್‌ ಸಮಿತಿಯನ್ನು ವಿಸರ್ಜಿಸಿದ್ದು, ಹೊಸ  ಮುಖಗಳಿಗೆ ಅವಕಾಶ ಮಾಡಿಕೊಟ್ಟರೆ ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಸಹಕಾರಿಯಾಗಲಿದೆ. ಹೀಗಾಗಿ ಹೊಸ ಮುಖಗಳನ್ನು ಸೇರ್ಪಡೆ ಮಾಡಿಕೊಂಡು ಕೆಪಿಸಿಸಿಯನ್ನು ಪುನಾರಚನೆ ಮಾಡಲಾಗುವುದು ಎಂದು ಹೇಳಿದರು.

ಬಿಎಸ್‌ವೈ ಕನಸು: ಸಮ್ಮಿಶ್ರ ಸರ್ಕಾರ ಶೀಘ್ರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಮತ್ತೆ ಮುಖ್ಯಮಂತ್ರಿ ಯಾಗುತ್ತೇನೆಂದು ಯಡಿಯೂರಪ್ಪ ಒಂದು  ವರ್ಷದಿಂದ ಕನಸು ಕಾಣುತ್ತಿದ್ದಾರೆ. ಅವರ ಕನಸುಗಳಿಗೆ ಉತ್ತರ ನೀಡದಿರುವುದೇ ಒಳ್ಳೆಯದು. ಒಂದು ವರ್ಷದಿಂದ ಮುಖ್ಯಮಂತ್ರಿಯಾಗುತ್ತೇನೆಂದು  ಹೇಳಿಕೊಂಡು ತಿರುಗುತ್ತಿರುವ ಯಡಿಯೂರಪ್ಪ ಅವರದ್ದು ಯಾವಾಗಲೂ ಹಗಲುಗನಸು. ಅವರು ಹೇಳಿದ್ದು ಯಾವತ್ತೂ ನಿಜವಾಗಿಲ್ಲ ಎಂದು ಲೇವಡಿ  ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next