Advertisement

ಗ್ಯಾರಂಟಿಯಿಂದ ಅಭಿವೃದ್ಧಿ ಕೆಲಸಕ್ಕೆ ಹಣವೇ ಇಲ್ಲ: ಕಾಂಗ್ರೆಸ್‌ ಶಾಸಕ ಅಲ್ಲಂಪ್ರಭು ಪಾಟೀಲ್‌

06:27 PM Feb 27, 2024 | Team Udayavani |

ಕಲಬುರಗಿ:ಪಂಚ ಗ್ಯಾರಂಟಿಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹೊಡೆತ ಬಿದ್ದಿದೆ. ಗ್ಯಾರಂಟಿಗಳಿಗೆ 65 ಸಾವಿರ ಕೋಟಿ ರೂ. ಹೋಗುತ್ತಿದೆ ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್‌ ಶಾಸಕ ಅಲ್ಲಮಪ್ರಭು ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಈಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಗ್ಯಾರಂಟಿಗಳು ಜಾರಿಯಾಗಿ ಎಲ್ಲ ಅನುದಾನ ಅದಕ್ಕೆ ಹೋಗುತ್ತಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲದಂತಾಗಿದೆ. ಹೀಗಾಗಿ ನಮ್ಮ ಹಣೆಬರಹಕ್ಕೆ ಜನರಿಂದ ಮೂದಲಿಸಿಕೊಳ್ಳುವಂತಾಗಿದೆ ಎಂದು ಅಸಮಾಧಾನ ಹೊರ ಹಾಕಿರವ ವಿಡಿಯೋ ವೈರಲ್‌ ಆಗಿದೆ.

ಏನಾದರೂ ಕೆಲಸ ಮಾಡಬೇಕೆಂದು ಆಯ್ಕೆಯಾಗಿದ್ದೇವೆ. ಆದರೆ ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಸೂಕ್ತ ಅನುದಾನ ದೊರಕದೇ ಇರುವುದು ಅಭಿವೃದ್ಧಿಗೆ ಅಡ್ಡಿಯಾಗಿದೆ ಎಂದಿರುವುದು ಚರ್ಚೆಗೆ ಗ್ರಾಸವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next