Advertisement

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

01:58 AM Jul 01, 2024 | Team Udayavani |

ಹೊಸದಿಲ್ಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ ಅನ್ನು ಆನ್‌ಲೈನ್‌ ಪರೀಕ್ಷೆಯಾಗಿ ಮಾರ್ಪಡಿಸುವತ್ತ ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ನೀಟ್‌ಗೆ ಸಂಬಂಧಿಸಿ ಹಲವು ವಿವಾದಗಳು ಸೃಷ್ಟಿಯಾಗಿವೆ.

Advertisement

ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಪ್ರಕರಣಗಳು ಭಾರೀ ವಿವಾದ ಸೃಷ್ಟಿಸಿದ್ದು, ಸಿಬಿಐ ಈಗಾಗಲೇ ಹಲವರನ್ನು ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ವಿಧಾನದಲ್ಲಿ ಸುಧಾರಣೆ ಯನ್ನು ತರಲು ಕೇಂದ್ರ ಸರಕಾರ ಹೆಜ್ಜೆಯಿಟ್ಟಿದ್ದು, ಆನ್‌ಲೈನ್‌ ಆಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಯೋಚಿಸಿದೆ ಎಂದು ಅವರು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಒಂದು ವಾರದಲ್ಲಿ ಈ ಬಗ್ಗೆ ಮೂರಕ್ಕೂ ಹೆಚ್ಚು ಉನ್ನತ ಮಟ್ಟದ ಸಭೆಗಳನ್ನು ನಡೆಸಲಾಗಿದೆ. ನೀಟ್‌ ಸುಧಾರಣೆಗೆ ಸಂಬಂಧಿಸಿ ಇಸ್ರೋದ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್‌ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಪರೀಕ್ಷೆ ಸುಧಾರಣೆಗೆ ಸಂಬಂಧಿಸಿ ಹಲವು ಶಿಫಾರಸುಗಳನ್ನು ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next