Advertisement

ಸರ್ಕಾರಿ ಕಚೇರಿಗಳಲ್ಲಿ ಇನ್ನು ಫೋಟೋ &ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ

04:05 PM Jul 15, 2022 | Team Udayavani |

ಬೆಂಗಳೂರು : ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರು ಇನ್ನು ಮುಂದೆ  ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Advertisement

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸರಕಾರಿ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರು, ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೇ ಮೊಬೈಲ್ ನಲ್ಲಿ ವಿಡಿಯೋ ಚಿತ್ರಿಕರಣ ಮಾಡುವಂತಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.

ಕಚೇರಿ ವೇಳೆಯಲ್ಲಿ ಬಂದು ಫೋಟೋ ವಿಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಹರಿಯ ಬಿಡುವುದು ಹಾಗೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಮಹಿಳಾ ನೌಕರರಿಗೆ ಇದರಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ದೂರು ಸಲ್ಲಿಸಲಾಗಿತ್ತು.

ಇದನ್ನೂ ಓದಿ : ಸಿದ್ದರಾಮಯ್ಯ ನೀಡಿದ 2 ಲಕ್ಷ ರೂ. ಪರಿಹಾರ ಧನವನ್ನೇ ಎಸೆದ ಮಹಿಳೆ!

Advertisement

Udayavani is now on Telegram. Click here to join our channel and stay updated with the latest news.

Next