ರಾಜ್ಯದ 1,204 ಸರ್ಕಾರಿ ಪಿಯು ಕಾಲೇಜುಗಳ ಪೈಕಿ 300ಕ್ಕೂ ಅಧಿಕ ಪಿಯು ಕಾಲೇಜಿನಲ್ಲಿ ಖಾಯಂ ಪ್ರಾಂಶುಪಾಲರಿಲ್ಲ.
Advertisement
ಹಂಗಾಮಿ ಪ್ರಾಂಶುಪಾಲರೇ ಕಾಲೇಜಿನ ಶಿಕ್ಷಣ ಹಾಗೂ ಆಡಳಿತಾತ್ಮಕ ವ್ಯವಸ್ಥೆ ನಿಭಾಯಿಸುವಂತಾಗಿದೆ. ಕಳೆದ ವರ್ಷ 400 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪ್ರಾಂಶುಪಾಲರು ಇರಲಿಲ್ಲ.
ಸರ್ಕಾರಿ ಪಿಯು ಕಾಲೇಜಿನಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗೆ ನೇರ ನೇಮಕಾತಿ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕಳೆದ ವರ್ಷ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ರಾಜ್ಯದಲ್ಲಿ 1969ರಿಂದ ಪಿಯು ಕಾಲೇಜು ಪ್ರಾಂಶುಪಾಲರ ಹುದ್ದೆಗೆ ನೇರ ನೇಮಕಾತಿ ನಡೆದಿಲ್ಲ. ಪ್ರಾಂಶುಪಾಲರ ನಿವೃತ್ತಿ ಸೇರಿ ವಿವಿಧ ಕಾರಣಗಳಿಂದ ತೇರವಾದ ಹುದ್ದೆಗೂ ನೇಮಕಾತಿ ಮಾಡಿಕೊಂಡಿಲ್ಲ. ಹೀಗಾಗಿ ವರ್ಷದಿಂದ ವರ್ಷಕ್ಕೆ ಪ್ರಾಂಶುಪಾಲರ ಖಾಲಿ ಹುದ್ದೆಗಳ ಸಂಖ್ಯೆ ಏರಿಕೆಯಾಗತ್ತಿದೆ. ಹೈದರಬಾದ್ ಕರ್ನಾಟಕ ಭಾಗದ 50ಕ್ಕೂ ಅಧಿಕ ಕಾಲೇಜಿನಲ್ಲಿ ಪ್ರಾಂಶುಪಾಲರ ಹುದ್ದೆ ಖಾಲಿ ಇದೆ.
Related Articles
– ಸಿ.ಶಿಖಾ, ನಿರ್ದೇಶಕಿ, ಪಿಯು ಇಲಾಖೆ
Advertisement