Advertisement

ಕಾಬೂಲ್‌ ಸ್ಫೋಟ: ಸಾವಿನ ಸಂಖ್ಯೆ 53ಕ್ಕೆ ಏರಿಕೆ

08:45 PM Oct 03, 2022 | Team Udayavani |

ಕಾಬೂಲ್‌: ತಾಲಿಬಾನ್‌ ಆಡಳಿತದ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಶಿಕ್ಷಣ ಕೇಂದ್ರವೊಂದರಲ್ಲಿ ಕಳೆದ ಶುಕ್ರವಾರ ನಡೆದಿದ್ದ ಬಾಂಬ್‌ ಸ್ಫೋಟದಿಂದ ಅಸುನೀಗಿದವರ ವಿವರಗಳನ್ನು ವಿಶ್ವಸಂಸ್ಥೆ ಬಿಡುಗಡೆ ಮಾಡಿದೆ. ಅದರ ಪ್ರಕಾರ ಒಟ್ಟು 53 ಮಂದಿ ಅಸುನೀಗಿದ್ದು, 46 ಮಂದಿ ವಿದ್ಯಾರ್ಥಿನಿಯರು ಮತ್ತು ಮಹಿಳೆಯರೇ ಇದ್ದಾರೆ.

Advertisement

“ನಮ್ಮ ಮಾನವ ಹಕ್ಕು ತಂಡವು ಕಾಬೂಲ್‌ನ ಬಳಿಯ ಶಿಕ್ಷಣ ಕೇಂದ್ರದಲ್ಲಿ ನಡೆದ ಬಾಂಬ್‌ ದಾಳಿ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದೆ’ ಎಂದು ವಿಶ್ವಸಂಸ್ಥೆಯು ಹೇಳಿದೆ. ಈ ದುರಂತದಲ್ಲಿ 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಇದರ ಬೆನ್ನಲ್ಲೇ ಸೋಮವಾರ ಕಾಬೂಲ್‌ನ ಪಶ್ಚಿಮ ಭಾಗದಲ್ಲಿ ಮತ್ತೊಂದು ಬಾಂಬ್‌ ಸ್ಫೋಟ ಉಂಟಾಗಿದೆ. ಆಫ್ಘನ್‌ನ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಒಂದಾಗಿರುವ ಹಜಾರಾ ಸಮುದಾಯವನ್ನು ಗುರಿಯಾಗಿಸಿಕೊಂಡೇ ಬಾಂಬ್‌ ದಾಳಿ ನಡೆಸಲಾಗಿದೆ. ಆದರೆ, ಹಾನಿಯ ಬಗ್ಗೆ ತಕ್ಷಣಕ್ಕೆ ಮಾಹಿತಿ ಸಿಕ್ಕಿಲ್ಲ. ಈ ನಡುವೆ, ಬಾಂಬ್‌ ದಾಳಿ ಖಂಡಿಸಿ, ಜನರು ಪ್ರತಿಭಟನೆಯನ್ನೂ ಆರಂಭಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next