Advertisement

ಕೋವಿಡ್ ನಾಲ್ಕನೇ ಅಲೆ ಬಗ್ಗೆ ಅನಗತ್ಯ ಭಯ ಬೇಡ; ಸಿಎಂ ಬೊಮ್ಮಾಯಿ

02:21 PM Apr 26, 2022 | keerthan |

ವಿಜಯಪುರ: ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆಯ ವಿಚಾರದಲ್ಲಿ ಜನತೆ ಅನಗತ್ಯವಾಗಿ ಭಯಪಡುವ ಅಗತ್ಯವಿಲ್ಲ. ಸೋಂಕಿತರು ಆಸ್ಪತ್ರೆಗೆ ಸೇರುವ ಪ್ರಮಾಣ ಜಾಸ್ತಿ ಇಲ್ಲದ ಕಾರಣ ಭಯಪಡುವ ಅಗತ್ಯವಿಲ್ಲ. ಆದರೆ ಜನರು ಸಾಂಕ್ರಾಮಿಕ ಮಾರಕ ರೋಗದ ವಿಷಯದಲ್ಲಿ ಜಾಗೃತಿ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಮಂಗಳವಾರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಸಭೆಯ ಬಳಿಕ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ಕೋವಿಡ್ ಸೋಂಕು ರೋಗದ ಬಗ್ಗೆ ಹೊಸದಾಗಿ ನಡಾವಳಿ ರೂಪಿಸಬೇಕಿದೆ. ಜನರು ಸರ್ಕಾರ ರೂಪಿಸುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸಬೇಕು ಎಂದು ಮನವಿ ಮಾಡಿದರು.

ಪ್ರಧಾನಿ ಮೋದಿ ಅವರ ಸಭೆಯ ಬಳಿಕ ಪರಿಸ್ಥಿತಿ ಅವಲೋಕಿಸಿ ರಾಜ್ಯದ ವಿಮಾನ‌ ನಿಲ್ದಾಣಗಳು, ಮಹಾರಾಷ್ಟ್ರ, ಕೇರಳ, ತಮಿಳುನಾಡು ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಾಗ್ರತೆ ವಹಿಸಲಾಗುತ್ತಿದೆ ಎಂದರು.

ಇದನ್ನೂ ಓದಿ:ಚಿಕ್ಕಮಗಳೂರು: ಆನೆದಂತದಿಂದ ಚೆಸ್ ಆಟದ ಪಾನ್ ತಯಾರಿಸಿ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

Advertisement

ರಾಜ್ಯದ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗ ಕೇಳಿದ ಪ್ರಶ್ನೆಗೆ, ಮಾಧ್ಯಮದವರಾದ ನೀವೇ ಡೇಟ್ ಫಿಕ್ಸ್ ಮಾಡಿ ಎಂದು‌ ನಗೆಯಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಹೈಕಮಾಂಡ್ ನಿಂದ ಸಚಿವ ಸಂಪುಟ ವಿಸ್ತರಣೆ ವಿಷಯವಾಗಿ ಇನ್ನೂ ನನಗೆ ಕರೆ ನೀಡಿಲ್ಲ. ಹೈಕಮಾಂಡ್ ಕರೆ ಬರುತ್ತಲೇ ದೆಹಲಿಗೆ ತೆರಳಿ, ವರಿಷ್ಠರ ಸೂಚನರ ಮೇರೆಗೆ ಸಂಪುಟ ವಿಸ್ತರಣೆ ನಡೆಯಲಿದೆ. ಈ ಸಂದರ್ಭದಲ್ಲಿ ಎಲ್ಲ ಜಿಲ್ಲೆಗಳಿಗೂ ಸಚಿವ ಸ್ಥಾನ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next