Advertisement
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸಚಿವ ಪುಟ್ಟರಂಗಶೆಟ್ಟಿಯವರ ಕಚೇರಿ ಸಿಬ್ಬಂದಿ ಮೇಲೆ ಬಂದಿರುವ ಆರೋಪಕ್ಕೆ ಸಚಿವರ ರಾಜೀನಾಮೆ ಕೇಳುವುದು ಸರಿಯಲ್ಲ. ಪ್ರಕರಣದ ಸಮಗ್ರ ತನಿಖೆ ನಡೆಯಲಿ. ಕಾಂಗ್ರೆಸ್ ಶಾಸಕರ ಅಥವಾ ಸಚಿವರ ಮೇಲೆ ಆರೋಪ ಸಾಬೀತಾದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
Related Articles
ಸಚಿವರೊಬ್ಬರ ಕಚೇರಿ ಸಹಾಯಕನ ಬಳಿ ಹಣ ಸಿಕ್ಕ ಪ್ರಕರಣ ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿರುವುದರಿಂದ ತನಿಖೆಯಲ್ಲಿ ಸಚಿವರು ತಪ್ಪಾಗಿರುವುದು ಮೇಲ್ನೋಟಕ್ಕೆ ಕಂಡು ಬಂದರೂ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಜೆಡಿಎಸ್ ವತಿಯಿಂದ ಕಾಂಗ್ರೆಸ್ ಮೇಲೆ ಒತ್ತಡ ತರುವ ಸಾಧ್ಯತೆಯಿದೆ. ಮಾಜಿ ಸಚಿವ ಬಸವರಾಜ ಹೊರಟ್ಟಿ ಸಹ, ತಕ್ಷಣವೇ ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡಲಿ, ತನಿಖೆಯಲ್ಲಿ ತಪ್ಪಿಲ್ಲ ಎಂಬುದು ಸಾಬೀತಾದರೆ ಮತ್ತೆ ಸಂಪುಟಕ್ಕೆ ಬರಲಿ ಎಂದು ಆಗ್ರಹಿಸಿದ್ದಾರೆ.
Advertisement