Advertisement

ರಾಜ್ಯದಲ್ಲಿ ನೈಟ್ ಕರ್ಫ್ಯೂ ಮಾಡಲ್ಲ, ಆದರೆ ಕಠಿಣ ಕ್ರಮಗಳ ಜಾರಿ: ಸಚಿವ ಸುಧಾಕರ್

12:42 PM Dec 04, 2020 | keerthan |

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಮಾಡುವ ಅಗತ್ಯವಿಲ್ಲ. ಆದರೆ ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.

Advertisement

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ಜಾರಿ ಮಾಡುವ ಕುರಿತು ಚರ್ಚೆಯಾಗಿಲ್ಲ. ತಾಂತ್ರಿಕ ಸಲಹಾ ಸಮಿಯೂ ಈ ಬಗ್ಗೆ ಯಾವುದೇ ಸಲಹೆ ನೀಡಿಲ್ಲ. ಹಾಗಾಗಿ ನೈಟ್ ಕರ್ಫ್ಯೂ ಪ್ರಶ್ನೆಯೇ ಇಲ್ಲ ಎಂದರು.

ಜನವರಿ ಫೆಬ್ರವರಿಯಲ್ಲಿ ರಾಜ್ಯದಲ್ಲಿ 2ನೇ ಅಲೆ ಬರುವ ಸಾಧ್ಯತೆ ಇದೆ. ಅದಕ್ಕೆ ತಜ್ಞರ ಸಮಿತಿ ಸ್ಪಷ್ಟ ಮಾಹಿತಿ ನೀಡಿದೆ.  ಮುಂದಿನ 45 ದಿನ ಮಹತ್ವದ್ದಾಗಿದೆ. ಲಾಕ್ ಡೌನ್ ಸಮಯದಲ್ಲಿ ತೆಗೆದುಕೊಂಡ ಕ್ರಮಗಳನ್ನು ಮತ್ತೆ ತೆಗೆದುಕೊಳ್ಳುವ ಅನಿವಾರ್ಯತೆ ಇದೆ ಎಂದರು.

ಜನರು ಗುಂಪು ಸೇರುವುದನ್ನು ನಿಯಂತ್ರಿಸಬೇಕು. ಧಾರ್ಮಿಕ ಹಬ್ಬಗಳು, ಮದುವೆ ಸಮಾರಂಭಗಳಿಗೆ 100 ಜನ ಮೀರದಂತೆ ನೋಡಿಕೊಳ್ಳಬೇಕು. ರಾಜಕೀಯ ಸಮಾರಂಭಗಳು 200 ಜನಕ್ಕಿಂತ ಹೆಚ್ಚಿರಬಾರದು. ಸಾವಿನ ಸಂದರ್ಭದಲ್ಲಿ 50 ಜನ ಮೀರಬಾರದು ಎಂದು ವರದಿ ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಕರ್ಪ್ಯೂ ಜಾರಿಯ ಪ್ರಶ್ನೆ ಇಲ್ಲ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಡಿಸೆಂಬರ್ 20 ರಿಂದ ಜನವರಿ 2 ರವರೆಗೆ ಕಠಿಣ ನಿಲುವು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ವರದಿ ಕೊಟ್ಟ ಮೇಲೆ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಸಿಎಂ ಜೊತೆ ಚರ್ಚಿಸಿ ಅಂತಿಮವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸುಧಾಕರ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next