Advertisement

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು NRCಯನ್ನು ಪಶ್ಚಿಮಬಂಗಾಳದಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ

10:23 AM Dec 15, 2019 | Team Udayavani |

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಯಾವುದೇ ರೀತಿಯ ಎನ್‌ ಆರ್‌ಸಿ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ತಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ. ಮಾತ್ರವಲ್ಲದೇ ಸೋಮವಾರದಿಂದ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Advertisement

ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಬೆಂಕಿಯೊಂದಿಗೆ ಸರಸವಾಡುತ್ತಿದೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದು ಪದೆ ಪದೇ ಹೇಳುತ್ತಿದ್ದೇವೆ.  ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು  ಎನ್‌ ಆರ್‌ ಸಿ ಯನ್ನು ಬಲವಂತವಾಗಿ ಜಾರಿಗೊಳಿಸುವುದಾಗಿ ಅವರು ಪಣತೊಟ್ಟಿದ್ದಾರೆ. ಆದರೇ ಪಶ್ಚಿಮ ಬಂಗಾಳದಲ್ಲಿ ಇವೆರಡೂ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮತ್ತೊಮ್ಮೆ ಒತ್ತಿ ಹೇಳಲಾಗುವುದು ಎಂದರು.

ಕೇಂದ್ರಕ್ಕೆ ಕಾಯ್ದೆಗಳನ್ನು ಜಾರಿಗೊಳಿಸುವ ಮತ್ತು ರಾಜ್ಯಗಳಿಗೆ ಅದರ ಕುರಿತು ನಿರ್ದೇಶನ ನೀಡುವ ಹಕ್ಕಿದೆ. ಆದರೆ ಅದನ್ನು ಕಾರ್ಯಗತಗೊಳಿಸುವುದು ರಾಜ್ಯ ಸರ್ಕಾರದ ವಿವೇಚನೆಗೆ  ಬಿಟ್ಟದ್ದು. ಬಲವಂತವಾಗಿ  ಕಾಯ್ದೆ ಹೇರುವುದು ಸಾಧ್ಯವೇ ? ಪಶ್ಚಿಮ ಬಂಗಾಳದಲ್ಲಿ, ನಮ್ಮ ಸರ್ಕಾರ ಕೇಂದ್ರದ ಈ ನಿರ್ದೇಶನವನ್ನು ಪಾಲಿಸುವುದಿಲ್ಲ  ಎಂದು ಮಿಡ್ನಾಪೂರ್ ಜಿಲ್ಲೆಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next