Advertisement

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ 

12:26 AM May 12, 2024 | Team Udayavani |

ಮೈಸೂರು: ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ. ಪ್ರಧಾನಿ ಮೋದಿ  ಸೋಲುವ ಹತಾಶೆಯಿಂದ ಹಾಗೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ವಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಹೊರಟಿವೆ. ನೀವು ನನ್ನನ್ನು ಕಾಪಾಡಬೇಕು ಎಂದು ಜನತೆಯಲ್ಲಿ ಮಾಡಿರುವ ಮನವಿಗೆ ಪ್ರತಿಕ್ರಿಯೆ ನೀಡಿದ ಅವರು, ಮೋದಿಯವರನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆಯೇ ಹೊರತು ವಿಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ ಎಂದರು.

ಸೋಲುತ್ತೇವೆಂದು ಹತಾಶರಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಅವರ ಭಾವನಾತ್ಮಕ ಆಟ ಜನರಿಗೆ ಗೊತ್ತಾಗಿದೆ. ಅವರು ಸುಳ್ಳು ಹೇಳುವುದು, ಭಾವನಾತ್ಮಕವಾಗಿ ಶೋಷಣೆ ಮಾಡುವುದು ಜನರಿಗೆ ತಿಳಿದಿದೆ. ಜನರಿಗೆ ಗೊತ್ತಾದ ಮೇಲೆ ಪುನಃ ಅದೇ ತಪ್ಪನ್ನು ಮಾಡುವುದಿಲ್ಲ. ಮೇಲಕ್ಕೇರಿದವರು ಕೆಳಕ್ಕೆ ಇಳಿಯಲೇಬೇಕು ಎಂದರು.

ಕಳೆದ ಹತ್ತು ವರ್ಷ ನರೇಂದ್ರ ಮೋದಿ ಪ್ರಧಾನಿಯಾಗಿ ಬಡವರ ಪರವಾಗಿ ಏನೂ ಮಾಡಿಲ್ಲ. ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿಪಕ್ಷಗಳ ಗುರಿ. ಯಾಕೆಂದರೆ ಮೋದಿಯಿಂದ ದೇಶದ ಆರ್ಥಿಕ ಹಾಗೂ ಬಡವರ ಅಭಿವೃದ್ಧಿ ಆಗಿಲ್ಲ. ನಾವು ಗೆದ್ದರೆ ಆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next