Advertisement

ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ ಸೇರಿದಂತೆ ಯಾರಿಂದಲೂ ಸಾಧ್ಯವಿಲ್ಲ: ದೇವೇಗೌಡ

12:56 PM Sep 27, 2021 | Team Udayavani |

ಬೆಂಗಳೂರು: ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಸೇರಿದಂತೆ ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದರು.

Advertisement

ಬಿಡದಿ ಫಾರ್ಮ್ ಹೌಸ್ ನಲ್ಲಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಎಲ್ಲ ನೋವುಗಳನ್ನು ನುಂಗಿದ್ದೇನೆ.  ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲೀ ಉತ್ತರ ನೀಡೋಣ ಎಂದರು.

ಇದನ್ನೂ ಓದಿ:ಪ್ರವಾಸೋದ್ಯಮ ಇಲಾಖೆಯ ನಡೆಯ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಆಕ್ಷೇಪ

ನಂತರ ಮಾತನಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಪಕ್ಷದ ಗುರಿ ಮತ್ತು ದಾರಿಯ ಬಗ್ಗೆ ಸ್ಪಷ್ಟತೆ ಮೂಡಿಸುವುದರ ಜತೆಗೆ, ಮುಂದಿನ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿರುವ ಅಭ್ಯರ್ಥಿಗಳಿಗೆ ನಿರ್ದಿಷ್ಟ ಗುರಿಗಳನ್ನು ನಿಗದಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ತರಬೇತಿಯನ್ನು ಕೊಡಲಾಗುವುದು. ಜೆಡಿಎಸ್ ಶಕ್ತಿ 30 ಎನ್ನುವವರಿಗೆ ಮುಂದಿನ ಚುನಾವಣೆಯಲ್ಲಿ ಉತ್ತರ ನೀಡಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next