Advertisement

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

06:10 PM May 17, 2024 | Shreeram Nayak |

ಸಾಗರ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಯದ್ದು ತಿರುಕನ ಕನಸು. ನಾವು 135 ಶಾಸಕರು ಗಟ್ಟಿಯಾಗಿದ್ದೇವೆ. ಎಷ್ಟು ಬಿಟ್ಟಿ ದುಡ್ಡು ತರುತ್ತೀರಿ ತನ್ನಿ. ನಮ್ಮ ಸರ್ಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ತೆಗೆಯುತ್ತೇವೆ ಎಂದು ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಅದು ಕನಸಾಗಿ ಉಳಿಯುತ್ತದೆಯೇ ವಿನಃ ನನಸಾಗುವುದಿಲ್ಲ. ಕಾಂಗ್ರೆಸ್‌ನಲ್ಲಿ ಯಾವುದೇ ಬಂಡಾಯ ಇಲ್ಲ. ಹಾಗೆ ನೋಡಿದರೆ ಬಿಜೆಪಿಯಲ್ಲೇ ದೊಡ್ಡ ಮಟ್ಟದ ಬಂಡಾಯ ಇದೆ. ನಮ್ಮಲ್ಲಿನ ಬಂಡಾಯವನ್ನು ಸರಿಪಡಿಸಿಕೊಳ್ಳುತ್ತೇವೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗದಂತೆ ನಮ್ಮ ವರಿಷ್ಠರು ನೋಡಿಕೊಳ್ಳುತ್ತಾರೆ. ಪಕ್ಷದಲ್ಲಿ ಅಸಮಾಧಾನ ಇದ್ದರೂ ಅವೆಲ್ಲ ತಾತ್ಕಾಲಿಕ. ಅಧಿ ಕಾರದಲ್ಲಿದ್ದಾಗ ಇವೆಲ್ಲಾ ಸಹಜ. ಎಲ್ಲವೂ ಸರಿಯಾಗುತ್ತದೆ.

ಕಾಂಗ್ರೆಸ್‌ ಪಕ್ಷಕ್ಕೆ ಪದವೀಧರರು ಮತ್ತು ಶಿಕ್ಷಕರು ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡುವ ವಿಶ್ವಾಸವಿದೆ. ಕಾಂಗ್ರೆಸ್‌ ಸರ್ಕಾರ ಅ ಧಿಕಾರದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಎರಡೂ ಕ್ಷೇತ್ರದ ಅಭಿವೃದ್ಧಿಗೂ ಸರ್ಕಾರ ಹೆಚ್ಚು ಗಮನ ಹರಿಸಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next