Advertisement

Loksabha; ನಮ್ಮ ಕುಟುಂಬದಿಂದ ಈ ಬಾರಿ ಯಾರಿಗೂ ಟಿಕೆಟ್ ಇಲ್ಲ: ಸತೀಶ್ ಜಾರಕಿಹೊಳಿ

04:02 PM Feb 22, 2024 | Team Udayavani |

ಬೆಳಗಾವಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರಿ ಪ್ರಿಯಂಕಾ ಸ್ಪರ್ಧೆ ಮಾಡುವದಿಲ್ಲ. ಸಾಮಾನ್ಯ ಕಾರ್ಯಕರ್ತರಿಗೆ ಚಿಕ್ಕೋಡಿ ಭಾಗದಿಂದ ಟಿಕೆಟ್‌ ಕೊಡಬೇಕು ಎಂಬ ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

Advertisement

ಬೆಳಗಾವಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿಯಲ್ಲಿ ಚಿಂಗಳೆ, ಬುಟಾಳೆ, ಗಜಾನನ ಸೇರಿದಂತೆ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಅಲ್ಲದೇ ಕ್ರೀಯಾಶೀಲ ಕಾರ್ಯಕರ್ತರು ಇರುವಾಗ ಈ ಭಾಗದಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದರು.

ಬೆಳಗಾವಿ ಹಾಗೂ ಚಿಕ್ಕೋಡಿ ಭಾಗದಲ್ಲಿ ಯಾರಿಗೆ ಟಿಕೆಟ್‌ ಕೊಡಬೇಕು ಎಂದು ಈಗಾಗಲೇ ಎರಡು ಕ್ಷೇತ್ರಕ್ಕೆ ತಲಾ ಇಬ್ಬರ ಹೆಸರು ಪೈನಲ್‌ ಮಾಡಲಾಗಿದೆ. ಅಂತಿಮ ತಿರ್ಮಾಣವನ್ನು ಹೈಕಮಾಂಡ್‌ ತೆಗೆದುಕೊಳ್ಳಲಿದೆ ಎಂದರು.

ಈ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಕಣಕ್ಕೆ ಇಳಿಸಬೇಕು ಎಂಬ ಚರ್ಚೆ ನಡೆದಿರುವುದು ಸತ್ಯ. ಆದರೆ ನಿಷ್ಠಾವಂತ ಕಾರ್ಯಕರ್ತರಿಗೂ ಅವಕಾಶ ನೀಡಬೇಕೆಂಬ ಉದ್ದೇಶದಿಂದ ನಾನು ಕಣಕ್ಕೆ ಇಳಿಯುತ್ತಿಲ್ಲ ಎಂದು ಸ್ಪಷ್ಟ ಪಡಿಸಿದರು.

ಮುಖ್ಯವಾಗಿ ನಮ್ಮ ಕ್ಷೇತ್ರದಲ್ಲಿ ಈ ಬಾರಿ ಮಹಿಳೆಯರಿಗೆ ಅವಕಾಶವಿಲ್ಲ ಎಂದು ಸ್ಪಷ್ಟನೆ ನೀಡಿದರು.

Advertisement

ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ತಿನಿಸು ಕಟ್ಟೆ ಅಕ್ರಮ ಮಳಿಗೆ ನಿರ್ಮಾಣದ ತನಿಖೆ ಒಂದು ಹಂತಕ್ಕೆ ಬಂದಿದೆ. ಅಧಿಕಾರಿ ಮಟ್ಟದಲ್ಲಿ ಸಹ ಚರ್ಚಿಸಿ ನೋಟಿಸ್‌ ನೀಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next