Advertisement

ಬಿಲ್ಲವರು ಒಗ್ಗಟ್ಟಾದರೆ ಎದುರಿಸುವ ಶಕ್ತಿ ಯಾರಿಗೂ ಇಲ್ಲ 

06:40 AM Jan 29, 2018 | Team Udayavani |

ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಬಿಲ್ಲವ ಸಮಾಜ ಒಗ್ಗಟ್ಟಾದರೆ, ನಮ್ಮನ್ನು ಎದುರಿಸುವ     ಶಕ್ತಿ ಯಾರಿಗೂ ಇರುವುದಿಲ್ಲ ಎಂದು  ಮಂಗಳೂರು ಮಹಾನಗರ ಪಾಲಿಕೆ ಮೇಯರ್‌ ಕವಿತಾ ಸನಿಲ್‌ ಹೇಳಿದ್ದಾರೆ.
 
ಬೆಂಗಳೂರಿನ ಬಿಲ್ಲವ ಅಸೋಸಿ ಯೇಷನ್‌ನ ವತಿಯಿಂದ ರವಿವಾರ “ಬಿಲ್ಲವ ಭವನ’ದ ದೇವಕಿ ಆನಂದ ಸುವರ್ಣ ಕನ್ವೆನ್‌ಷನ್‌ ಹಾಲ್‌ನಲ್ಲಿ ಹಮ್ಮಿ ಕೊಂಡಿದ್ದ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಮಹಿಳಾ ದಿನಾಚರಣೆ-2018’ರಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದ  ಅವರು ದಕ್ಷಿಣ ಕನ್ನಡದಲ್ಲಿ ಬಿಲ್ಲವ ಸಮಾಜ ಮತ್ತು ಯುವಕರ ಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದರು.  

Advertisement

ಬೆಂಗಳೂರಿನಲ್ಲಿ ಬಿಲ್ಲವ ಸಮಾಜ ಇಷ್ಟೊಂದು ಸಂಘಟಿತವಾಗಿರುವುದನ್ನು  ನೋಡಿದರೆ ಬಹಳ ಸಂತಸವಾಗುತ್ತದೆ. ಆದರೆ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ಬಿಲ್ಲವ ಸಮಾಜ ರಾಜಕೀಯದ ಸಹಿತ ಇತರ ಕ್ಷೇತ್ರಗಳಲ್ಲಿ  ಅವಕಾಶ ವಂಚಿತವಾಗಿದೆ. ಹೆಚ್ಚಿನ ಸಂಖ್ಯೆಯ ಬಿಲ್ಲವ ಯುವಕರು ಇಂದು ಜೈಲಿನಲ್ಲಿದ್ದಾರೆ. ಬಿಲ್ಲವ ಯುವಕರು ದಾರಿ ತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.

ಕೊಲೆ ಮಾಡಬೇಡಿ: ಮೇಯರ್‌ ಅವರ ಮಾತಿಗೆ ಪೂರಕವಾಗಿ ಮಾತನಾಡಿದ ಬೆಂಗಳೂರಿನ ಬಿಲ್ಲವ ಅಸೋಸಿಯೇಷನ್‌ನ ಅಧ್ಯಕ್ಷ ಎಂ. ವೇದಕುಮಾರ್‌, ದಕ್ಷಿಣ ಕನ್ನಡದಲ್ಲಿ ನಮ್ಮ ಬಿಲ್ಲವ ಸಮಾಜದ ಯುವಕರು ಯಾರ್ಯಾರದೋ ಮಾತು ಕೇಳಿ ದಾರಿ ತಪ್ಪುತ್ತಿದ್ದಾರೆ. ಅವರಿಗೆ ಬುದ್ಧಿವಾದ ಹೇಳಿ ಸರಿ ದಾರಿಗೆ  ತರಬೇಕಿದೆ ಎಂದರು. 

ಶಾಸಕ ಮತ್ತು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವಿ. ಗುತ್ತೇದಾರ್‌, ಬಿಬಿಎಂಪಿ ಸದಸ್ಯೆ ಭಾಗ್ಯಲಕ್ಷ್ಮೀ ಮುರಳಿ, ಕರ್ನಾಟಕ ಆರ್ಯ ಈಡಿಗ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ನಳಿನಾಕ್ಷಿ ಸಣ್ಣಪ್ಪ, ಬಿಲ್ಲವ ಅಸೋಸಿಯೇಷನ್‌ನ ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next