Advertisement

ಯಾರೇ ಪಕ್ಷ ಬಿಟ್ರು ಹೆದರಲ್ಲ;ದೇವೇಗೌಡ, ಅಪಪ್ರಚಾರದಿಂದ ಜೆಡಿಎಸ್ ಗೆ ಸೋಲು: HDK

12:07 PM Jun 08, 2019 | Nagendra Trasi |

ಬೆಂಗಳೂರು: ಚುನಾವಣೆಯಲ್ಲಿ ಸೋತರೂ ಸುಮ್ಮನೆ ಕುಳಿತಿಲ್ಲ. ಯಾರೇ ಪಕ್ಷ ಬಿಟ್ಟು ಹೋದರೂ ಹೆದರಲ್ಲ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಸುವ ನಿಟ್ಟಿನಲ್ಲಿ ಕೊನೆಯ ಉಸಿರು ಇರುವವರೆಗೂ ಹೋರಾಟ ನಡೆಸುತ್ತೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಗುಡುಗಿದ್ದಾರೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

Advertisement

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದ ಜೆಡಿಎಸ್ ಅಭ್ಯರ್ಥಿಗಳಿಗೆ ಅರಮನೆ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷಕ್ಕೆ ನಿಷ್ಠಾವಂತರಾಗಿರಿ, ದ್ರೋಹ ಬಗೆಯಬೇಡಿ ಎಂದರು.

ಸುಖದ ಸುಪ್ಪತ್ತಿಗೆಯಲ್ಲಿ ನಾನು ಕಪ್ಪು ಕನ್ನಡಕವೂ ಹಾಕಿಲ್ಲ. ಸೋತು ಹೋಗಿದ್ದೇನೆ ಎಂದು ಸುಮ್ಮನೆ ಕುಳಿತುಕೊಳ್ಳಲೂ ಇಲ್ಲ. ಪಕ್ಷ ಸಂಘಟನೆಗಾಗಿ ಹಗಲಿರುಳು ದುಡಿದ ಜೀವ ಇದು. ನನ್ನ ಕೊನೆಯ ಉಸಿರಿನವರೆಗೂ ಹೋರಾಟ ನಡೆಸುವುದಾಗಿ ಹೇಳಿದರು.

ಯಾರೇ ಪಕ್ಷ ಬಿಟ್ಟರೂ ಹೆದರುವ ಪ್ರಶ್ನೆಯೇ ಇಲ್ಲ. ಸೋತಿದ್ದಕ್ಕೆ ಹೆಮ್ಮೆ ಇದೆ. ಮತ್ತೆ ಪಕ್ಷವನ್ನು ಪುನರ್ ಸಂಘಟಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ:

Advertisement

ಕಳೆದ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಕೆಲವರು ಅಪಪ್ರಚಾರ ಮಾಡಿದ್ದರಿಂದ ನಮಗೆ ಹಿನ್ನಡೆಯುಂಟಾಯಿತು. ಜೆಡಿಎಸ್ ಗೆ ಮತ ಹಾಕಿದರೆ ಅವರು ಬಿಜೆಪಿ ಜೊತೆ ಕೈಜೋಡಿಸುತ್ತಾರೆ ಎಂದು ಕೈ ಜೋಡಿಸುತ್ತಾರೆ ಎಂದು ಅಪಪ್ರಚಾರ ಮಾಡಿದ್ದರು. ಇದರಿಂದಾಗಿ ಮುಸ್ಲಿಂ ಮತಗಳು ನಮಗೆ ಬೀಳಲಿಲ್ಲ. ಕನಿಷ್ಠ ನಮಗೆ 60ರಿಂದ 70 ಸ್ಥಾನಗಳು ಜೆಡಿಎಸ್ ಗೆ ಬರುತ್ತದೆ ಎಂದು ಭಾವಿಸಿದ್ದೆ. ಆದರೆ 37 ಸ್ಥಾನ ಬಂತು ಎಂದು ಎಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಬೇಸರ ಹೊರಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next