ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಪ್ರತಿಪಕ್ಷದ ಉಪ ನಾಯಕನ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ. ಆ ಹುದ್ದೆ ಬೇಡ. ಸಿದ್ದರಾಮಯ್ಯ ಪ್ರತಿ ಪಕ್ಷದ ನಾಯಕರಾಗಿರುವಾಗ ಪಕ್ಷದ ಕಾರ್ಯಾಧ್ಯಕ್ಷರ ಹುದ್ದೆ ಕೇಳುವುದೂ ಸಮಂಜಸವಲ್ಲ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ 70ನೇ ವರ್ಷದ ಜನ್ಮ ದಿನ ಆಚರಿಸಿಕೊಂಡು ಮಾಧ್ಯಮ ಗಳೊಂದಿಗೆ ಮಾತನಾಡಿದ ಅವರು, “ನಾನು ಪಕ್ಷದಲ್ಲಿ ತಾಲೂಕು ಸಂಘ ಟನಾ ಕಾರ್ಯದರ್ಶಿ ಹುದ್ದೆ ಯಿಂದ ಎಐ ಸಿಸಿ ಸದಸ್ಯನ ಸ್ಥಾನದವರೆಗೂ ಜವಾಬ್ದಾರಿ ಗಳನ್ನು ನಿಭಾಯಿಸಿದ್ದೇನೆ. ಪಕ್ಷದಲ್ಲಿ ಸಾಮಾ ಜಿಕ ನ್ಯಾಯದ ಅಡಿಯಲ್ಲಿ ಬೇರೆ ನಾಯ ಕರಿಗೆ ಹುದ್ದೆಗಳನ್ನು ನೀಡಿ, ನನಗೆ ಪಕ್ಷದಲ್ಲಿ ಬೇರೆ ಯಾವುದೇ ಜವಾಬ್ದಾರಿ ನೀಡಿದರೂ ನಿಷ್ಠೆಯಿಂದ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು.
ಇದೇ ವೇಳೆ, ಬಿಜೆಪಿ ಬಗ್ಗೆ ಜೆಡಿಎಸ್ ನಾಯಕರು ಮೃದು ಧೋರಣೆ ತಾಳುತ್ತಿ ರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಧಾನ ಸಭೆ ಚುನಾವಣೆ ಪೂರ್ವದಲ್ಲಿಯೇ ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿ ಕೊಂಡಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಅವರು ಬಿಜೆಪಿ ಜೊತೆ ಹೋದರೆ ಏನು ಮಾಡಲೂ ಆಗುವುದಿಲ್ಲ. ನಾವು ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತು ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸುವ ಕೆಲಸ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಸಿದ್ದರಾಮಯ್ಯಗೆ ನಾಯಕತ್ವ ದೊರೆತಾಗ ಅಹಿಂ ದ ವಿಷಯ ಮುಂದೆ ಬರುತ್ತದೆ. ಕಾಂಗ್ರೆಸ್ ಯಾವಾಗಲೂ ಹಿಂದುಳಿದವರ ಪರ ಕೆಲಸ ಮಾಡುತ್ತಿದೆ. ಇಂದಿರಾಗಾಂಧಿ, ದೇವರಾಜ ಅರಸು ಅವರ ಕಾಲದಿಂದಲೂ ಕಾಂಗ್ರೆಸ್ ಎಲ್ಲ ವರ್ಗದ ಪರವಾಗಿ ಕೆಲಸ ಮಾಡಿದೆ. ಸಿದ್ದರಾಮಯ್ಯ ಅವರು ಎಲ್ಲ ವರ್ಗದ ಜನರ ಪರವಾಗಿ ಯೋಜನೆಗಳನ್ನು ರೂಪಿಸಿದ್ದರು.
ಈಗ ಎಲ್ಲ ರಾಜಕೀಯ ನಾಯಕರಿಗೆ ಸಿದ್ದರಾಮಯ್ಯ ಅವರೇ ಕಾಣಿಸುತ್ತಿದ್ದಾರೆ. ಅವರನ್ನೇ ಕೇಂದ್ರಿಕೃತವಾಗಿ ಮಾತನಾಡುತ್ತಿರುವುದು ಅವರ ಶಕ್ತಿಯನ್ನು ಬಲಗೊಳಿಸುತ್ತದೆ ಎಂದು ಹೇಳಿದರು. ಇದೇ ವೇಳೆ, ತಾವು 70ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್‌ನಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.