Advertisement
ಕೆನರಾ ಕೈಗಾರಿಕೆ ಮತ್ತು ವಾಣಿಜ್ಯ ಕೈಗಾರಿಕಾ ಸಂಸ್ಥೆ ವತಿಯಿಂದ ಶನಿವಾರ ಸಂಸ್ಥೆಯ ಸಭಾಂಗಣದಲ್ಲಿ “ಏರ್ ಸರ್ವಿಸ್ ಮತ್ತು ಏರ್ ಕಾರ್ಗೊ ಪರಿಚಯ’ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಈಗಿರುವ ಮಂಗಳೂರು ವಿಮಾನ ನಿಲ್ದಾಣವು ಮುಂದಿನ 50 ವರ್ಷಗಳ ಅವಧಿಗೆ ಜನರ ಬೇಡಿಕೆ ಪೂರೈಸುವ ಸಾಮರ್ಥ್ಯ ಹೊಂದಿದೆ. ಆದ್ದರಿಂದ ಹೊಸ ವಿಮಾನ ನಿಲ್ದಾಣದ ಯೋಜನೆ ಇಲ್ಲ ಎಂದು ತಿಳಿಸಿದರು.
ಮಂಗಳೂರು ವಿಮಾನ ನಿಲ್ದಾಣದ ಅಭಿವೃದ್ಧಿ ವಿಚಾರವಾಗಿ ಗಮನಹರಿಸಲಾಗುವುದು. ವಿಮಾನ ನಿಲ್ದಾಣ ಸೌಲಭ್ಯ ವಿಸ್ತರಣೆಗೆ ಅವಶ್ಯವಿರುವ 33 ಎಕರೆ ಜಾಗ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ. ಮಂಗಳೂರು ನಗರದಿಂದ ಬಜಪೆ ವಿಮಾನ ನಿಲ್ದಾಣ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುಂಡಿ ಬಿದ್ದಿದ್ದು, ಈ ಬಗ್ಗೆ ಜಿಲ್ಲಾಡಳಿತಕ್ಕೆ ಅನೇಕ ದೂರುಗಳು ಬಂದಿವೆ. ಆದರೆ ಹೆದ್ದಾರಿಗಳು ಕೇಂದ್ರ ಸರಕಾರದ ಅಧೀನಕ್ಕೆ ಒಳಪಟ್ಟಿರುತ್ತದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರ ಗಮನಹರಿಸಬೇಕಿದೆ. ಜಿಲ್ಲಾಡಳಿತವೂ ವಿಶೇಷ ಗಮನಹರಿಸಲಿದೆ ಎಂದು ಹೇಳಿದರು.ರಾಜ್ಯದಲ್ಲಿ ದ.ಕ. ಜಿಲ್ಲೆಗೆ ಮೊದಲನೇ ಸ್ಥಾನಕ್ಕೇರುವ ಎಲ್ಲ ಅರ್ಹತೆಗಳಿವೆ. ದ.ಕ. ಅವಕಾಶಗಳ ಹೆಬ್ಟಾಗಿಲಾಗಿದ್ದು, ಮೂಲಸೌಕರ್ಯಕ್ಕೆ, ಮಾನವ ಸಂಪದಕ್ಕೆ ಯಾವುದೇ ರೀತಿಯ ಕೊರತೆ ಇಲ್ಲ. ಎಂದರು.
Related Articles
ಪ್ರಾಕೃತಿಕ ವಿಪತ್ತು ಸಂಭವಿಸುವ ವೇಳೆ ವಿಮಾನ ಸೇರಿದಂತೆ ಇತರ ಸಂಚಾರ ವ್ಯವಸ್ಥೆಯ ಪ್ರಯಾಣ ದರ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಸರಕಾರದೊಂದಿಗೆ ಚರ್ಚೆ ನಡೆಸಲಾ ಗುವುದು. ಇತ್ತೀಚೆಗೆ ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಪ್ರಯಾಣದರ ಹೆಚ್ಚಿಸಿದ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ ಕ್ರಮ ಕೈಗೊಂಡಿತ್ತು ಎಂದು ವಿವರಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ. ರಾವ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಏರ್ ಕಾರ್ಗೊ ಕ್ಷೇತ್ರದಲ್ಲಿ ಬೆಳವಣಿಗೆಯಾಗುತ್ತಿದೆ. ಇಂತಹ ಸಮಯದಲ್ಲಿ ಈ ರೀತಿಯ ಕಾರ್ಯಾಗಾರಗಳ ಆವಶ್ಯಕತೆ ಇದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆನರಾ ಕೈಗಾರಿಕೆ ಮತ್ತು ವಾಣಿಜ್ಯ ಕೈಗಾರಿಕಾ ಸಂಸ್ಥೆ ಅಧ್ಯಕ್ಷೆ ವತಿಕಾ ಪೈ,ಏರ್‌ಲೈನ್ ಸರ್ವಿಸ್ ಮತ್ತು ಏರ್‌ಪೋರ್ಟ್ ಸಬ್‌ಕಮಿಟಿ ಮಾಜಿ ಅಧ್ಯಕ್ಷ ಕ್ಯಾ| ಜಾನ್ ಪ್ರಸಾದ್ ಮಿನೇಜಸ್, ರೀನಾ ಶೆಟ್ಟಿ, ಪ್ರಶಾಂತ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement