ಕೊಲ್ಲೂರು: ಶಿಕ್ಷಕರು ಮಕ್ಕಳಿಗೆ ಪಾಠ ಪ್ರವಚನ ಮಾಡಬೇಕೇ ವಿನಾ ಯಾವುದೇ ಪಕ್ಷದ ಪರ ಕೆಲಸ ಮಾಡುವುದನ್ನು ಸಹಿಸಲಾಗುವುದಿಲ್ಲ. ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರಿಗಿದೆ ಎನ್ನುವುದನ್ನು ಮರೆಯ ಬಾರದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಶಿಕ್ಷಣ ಇಲಾಖೆಯಲ್ಲಿ ಬಹಳಷ್ಟು ಬದಲಾವಣೆ ಆಗಿದೆ. ರಾಜ್ಯದ ಸಾವಿರಾರು ಸರಕಾರಿ ಶಾಲೆಗಳ ಸ್ಥಿತಿಗತಿಗೆ ಅನುಗುಣವಾಗಿ ಅವುಗಳನ್ನು ಮೇಲ್ದರ್ಜೆಗೇರಿಸಿ ಮಕ್ಕಳ ಅಭ್ಯಾಸಕ್ಕೆ ಅನುಕೂಲ ಕಲ್ಪಿಸು ವಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ. ಅಧಿ ಕಾರ ವಹಿಸಿಕೊಂಡು ಕೆಲವೇ ತಿಂಗಳಾಗಿರುವುದರಿಂದ ಹಂತಹಂತವಾಗಿ ಬದಲಾವಣೆ ಮಾಡಲಾಗುವುದು ಎಂದರು.
ಸರಕಾರಿ ಶಾಲೆಗಳ ಆಟದ ಮೈದಾನ ದುರ್ಬಳಕೆ ಆಗದಂತೆ ಕ್ರಮ ಕೈಗೊಳ್ಳ ಲಾಗುವುದು. ಶಾಲೆಯ ಕಾರ್ಯಕ್ರಮ ಹೊರತುಪಡಿಸಿ ಇನ್ನಿತರ ಯಾವುದೇ ಕಾರ್ಯಕ್ರಮ ನಡೆಸಲು ಶಿಕ್ಷಣಾ ಧಿಕಾರಿಗಳ ಅನುಮತಿ ಪಡೆಯಬೇಕು. ರಾಜ್ಯ ಸರಕಾರವು ಜನಪರ ಕಾಳಜಿಯ ಅನೇಕ ಯೋಜನೆಗಳನ್ನು ಅನುಷ್ಠಾನ ಗೊಳಿಸುತ್ತಿದೆ. ಯಾವುದೇ ಟೀಕೆ ಟಿಪ್ಪಣಿಗಳಿಗೆ ಕಾಂಗ್ರೆಸ್ ಸರಕಾರ ಜಗ್ಗುವುದಿಲ್ಲ, ಬಗ್ಗುವುದಿಲ್ಲ ಎಂದರು.
ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಜಿ.ಪಂ. ಮಾಜಿ ಸದಸ್ಯರಾದ ರಾಜು ಪೂಜಾರಿ, ಬಾಬು ಹೆಗ್ಡೆ, ತಾ.ಪಂ. ಮಾಜಿ ಸದಸ್ಯ ರಮೇಶ ಗಾಣಿಗ ಉಪಸ್ಥಿತರಿದ್ದರು.