Advertisement

17ರ ವರೆಗೂ ಪ್ರಯಾಣಿಕರ ರೈಲು ಸಂಚಾರ ಮಾಡೋದಿಲ್ಲ

11:52 AM May 03, 2020 | Suhan S |

ಹುಬ್ಬಳ್ಳಿ: ಲಾಕ್‌ಡೌನ್‌ ಮುಂದುವರಿದಿರುವ ಹಿನ್ನೆಲೆಯಲ್ಲಿ ಮೇ 17ರ ವರೆಗೆ ಪ್ರಯಾಣಿಕರ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಕೇಂದ್ರ ಸರಕಾರ ದೇಶಾದ್ಯಂತ ಲಾಕ್‌ ಡೌನ್‌ ಮುಂದುವರಿಸಿರುವ ಕಾರಣ ರೈಲ್ವೆ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ. ಎಂದಿನಂತೆ ಸರಕು ಸಾಗಾಣಿಕೆ ರೈಲುಗಳ ಸಂಚಾರ ಸೇವೆ ಮುಂದುವರಿಯಲಿವೆ. ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿ ಪ್ರಕಾರ ಅಲ್ಲಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ಪ್ರವಾಸಿಗರು, ಯಾತ್ರಿಕರು, ವಿದ್ಯಾರ್ಥಿಗಳ ಸಾಗಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಮನವಿ ಮೇರೆಗೆ ಪ್ರಯಾಣಿಕ ರೈಲುಗಳು ಸಂಚರಿಸಲಿವೆ. ಅಂತಾರಾಜ್ಯ ಸಂಚಾರ ಮಾಡುವ ಪ್ರಯಾಣಿಕರು ಆಯಾ ರಾಜ್ಯ ಸರಕಾರವನ್ನು ಸಂಪರ್ಕಿಸಿ ಅನುಮತಿ ಪಡೆಯಬೇಕಾಗಿದೆ. ಹೀಗಾಗಿ ಯಾರಿಗೂ ಪ್ರಯಾಣದ ಟಿಕೆಟ್‌ ವಿತರಣೆ ಮಾಡುವುದಿಲ್ಲ. ಪ್ರಯಾಣಿಕರು ಯಾವುದೇ ಕಾರಣಕ್ಕೂ ರೈಲ್ವೆ ನಿಲ್ದಾಣಕ್ಕೆ ಬರುವ ಅಗತ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next