Advertisement

ಕೋವಿಡ್ ಪರೀಕ್ಷೆ: ವರದಿ ಬಾಕಿ ಇಲ್ಲ

07:20 AM Jun 16, 2020 | Team Udayavani |

ಗದಗ: ಕೋವಿಡ್ ಪತ್ತೆಗಾಗಿ 7,599 ಜನರಿಂದ ಗಂಟಲಿನ ಮಾದರಿಯನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಿದ್ದು, 7,550 ಜನರ ವರದಿಗಳು ನೆಗೆಟೀವ್‌ ಆಗಿದೆ. ಆ ಪೈಕಿ ಒಟ್ಟು 49 ಪ್ರಕರಣಗಳು ದೃಢಪಟ್ಟಿದ್ದು, ಯಾವುದೇ ವರದಿ ಬರಲು ಬಾಕಿ ಇಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಈವರೆಗೆ 7,080 ಜನರು ನಿಗಾಕ್ಕೆ ಒಳಗಾಗಿದ್ದು, ವೈದ್ಯಕೀಯ ಸೌಲಭ್ಯದೊಂದಿಗೆ 12 ಜನರು ಆಸ್ಪತ್ರೆಯಲ್ಲಿದ್ದಾರೆ. ಒಟ್ಟು 49 ಪಾಸಿಟಿವ್‌ ಪ್ರಕರಣಗಳಲ್ಲಿ 8 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿ-166 ಹಾಗೂ ಪಿ-4082 ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದಂತೆ 39 ಜನ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮುಂಬೈ-ಗದಗ ರೈಲಿನಲ್ಲಿ ಮಹಾರಾಷ್ಟ್ರದಿಂದ ಗದಗ ರೈಲು ನಿಲ್ದಾಣಕ್ಕೆ ಜೂ.15ರ ವರೆಗೆ 747 ಪ್ರಯಾಣಿಕರು ಆಗಮಿಸಿದ್ದಾರೆ. ಅದರಲ್ಲಿ 314 ಜನ ಗದಗ ಜಿಲ್ಲೆಯವರಿದ್ದಾರೆ. ಇದರಲ್ಲಿ 271 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಹಾಗೂ 43 ಜನರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗಿದೆ. 314 ಜನರ ಪೈಕಿ 8 ಜನರಲ್ಲಿ ಕೋವಿಡ್‌-19 ಸೋಂಕು ದೃಢಪಟ್ಟಿದೆ. 433 ಜನರು ಬೇರೆ ಜಿಲ್ಲೆಯವರಾಗಿದ್ದು, ಸಂಬಂಧಪಟ್ಟ ಜಿಲ್ಲೆಗಳಿಗೆ ಕಳುಹಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next