Advertisement

ಅತಿಥಿ ಶಿಕ್ಷಕರ ಕಾಯಂ ಇಲ್ಲ: ಸಚಿವ ಮಧು ಬಂಗಾರಪ್ಪ

08:53 PM Jul 04, 2023 | Team Udayavani |

ವಿಧಾನಸಭೆ: ಅತಿಥಿ ಶಿಕ್ಷಕರನ್ನು ಕಾಯಂಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ. ಕಾಯಂ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನ್ಯಾಯಾಲಯದಲ್ಲಿರುವ ಪ್ರಕರಣ ಇತ್ಯರ್ಥ ಆದ ಕೂಡಲೇ ಶಿಕ್ಷಕರ ನೇಮಕಾತಿ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Advertisement

ಗಮನ ಸೆಳೆಯುವ ಸೂಚನೆ ವೇಳೆ ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಇಲ್ಲದಂತಾಗಿದೆ. ಅವರಿಗೆ ಸೇವಾ ದೃಢೀಕರಣ ಪತ್ರ ನೀಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಅತಿಥಿ ಶಿಕ್ಷಕರು ಎನ್ನುವ ಬದಲು ಗೌರವಾನ್ವಿತ ಶಿಕ್ಷಕರು ಎಂದು ಸಂಬೋಧಿಸಿಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಕ್ಕಳಿಗೆ ತೊಂದರೆ ಆಗದಂತೆ 33 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಹಿಂದಿನಿಂದಲೂ ಈ ಪದ್ಧತಿ ನಡೆದುಕೊಂಡು ಬಂದಿದೆ. ಅವರ ಗೌರವ ಸಂಭಾವನೆ ಹೆಚ್ಚಳದ ಬಗ್ಗೆ ಪರಿಶೀಲಿಸಲಾಗುತ್ತದೆ. ಆದರೆ, ಅವರನ್ನು ಕಾಯಂ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಯಂ ಶಿಕ್ಷಕರ ನೇಮಕಾತಿಗೂ ಪ್ರಕ್ರಿಯೆ ನಡೆಸಲಾಗುತ್ತದೆ. ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದ್ದು, ಇತ್ಯರ್ಥ ಆದ ತಕ್ಷಣ ಶಿಕ್ಷಕರ ನೇಮಕ ಆಗಲಿದೆ ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next