Advertisement

ಶಾಲಾವಧಿಯಲ್ಲಿ ವೈಯಕ್ತಿಕ ಚಟುವಟಿಕೆ ಮಾಡುವಂತಿಲ್ಲ

11:47 PM Nov 05, 2019 | Lakshmi GovindaRaju |

ಬೆಂಗಳೂರು: ಶಾಲಾವಧಿಯಲ್ಲಿ ಶಿಕ್ಷಕರು ವೈಯಕ್ತಿಕ ಕೆಲಸ ಕಾರ್ಯಗಳಿಗೆ ಗಮನ ಹರಿಸುವುದು ಕಂಡು ಬಂದರೆ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆದೇಶಿಸಿದ್ದಾರೆ. ಶಿಕ್ಷಕರು ಶಾಲಾವಧಿಯಲ್ಲಿ ಸ್ವಂತ ಕೆಲಸ ಮಾಡಿಕೊಳ್ಳುವ ಪ್ರಕರಣಗಳ ಕುರಿತಂತೆ ಗಂಭೀರ ಕ್ರಮ ತೆಗೆದುಕೊಳ್ಳಲು ಸಚಿವ ಎಸ್‌.ಸುರೇಶ್‌ ಕುಮಾರ್‌ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

Advertisement

ಶಾಲಾ ಶಿಕ್ಷಕರು ಶಾಲಾ ಅವಧಿಯಲ್ಲಿ ತಮ್ಮ ವೈಯಕ್ತಿಕ ಕಾರ್ಯಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಿರುವ ಬಗ್ಗೆ ಅನೇಕ ದೂರುಗಳು ಬಂದಿವೆ. ಪ್ರವಾಸದ ವೇಳೆ ನನ್ನ ಗಮನಕ್ಕೂ ಬಂದಿದೆ. ಕೆಲವು ಸರ್ಕಾರಿ ಶಾಲಾ ಶಿಕ್ಷಕರು ಶಾಲಾ ಅವಧಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತಂತೆ ಗಮನ ಹರಿಸದೇ ತಮ್ಮ ವೈಯಕ್ತಿಕ ಕೆಲಸ ಕಾರ್ಯಗಳಿಗೆ ಪ್ರಾಧಾನ್ಯತೆ ನೀಡುತ್ತಿದ್ದಾರೆ.

ಇಂತಹ ಘಟನೆಗಳು ಶಿಕ್ಷಣ ಇಲಾಖೆಗೆ ಘನತೆ ತರುವುದಿಲ್ಲ. ಸರ್ಕಾರಿ ಕೆಲಸಗಳನ್ನು ಹೊರತುಪಡಿಸಿ ಬೇರಾವುದೇ ವೈಯಕ್ತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದ ರೀತಿಯಲ್ಲಿ ರಾಜ್ಯಾದ್ಯಂತ ಎಲ್ಲ ಶಿಕ್ಷಕರಿಗೆ ಕಟ್ಟುನಿಟ್ಟಾದ ಸೂಚನೆ ಹೊರಡಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಚಿವರು ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next