Advertisement

ಮೋದಿ ಪ್ರವಾಸದಲ್ಲಿ ಯಾವುದೇ ರಾಜಕೀಯ ಭೇಟಿಗೆ ಅವಕಾಶವಿಲ್ಲ

12:57 PM Jun 20, 2022 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನಗಳ ರಾಜ್ಯ ಪ್ರವಾಸ ಸಂದರ್ಭದಲ್ಲಿ ಯಾವುದೇ ರಾಜಕೀಯ ಭೇಟಿ ಹಾಗೂ ಚರ್ಚೆಗೆ ಅವಕಾಶ ಹಾಗೂ ಸಮಯ ನಿಗದಿಯಾಗಿಲ್ಲ.

Advertisement

ಅಭಿವೃದ್ಧಿ ಕಾರ್ಯಕ್ರಮಗಳ ಶಿಲಾನ್ಯಾಸ ಹಾಗೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನೆ ಹಾಗೂ ಇನ್ನಿತರ ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಮಾತ್ರ ಅವರು ಭಾಗವಹಿಸಲಿದ್ದಾರೆ. ಸುಮಾರು 900 ದಿನಗಳ ನಂತರ ಮೋದಿ ರಾಜ್ಯ ಪ್ರವಾಸಕ್ಕೆ ಬಂದಿದ್ದರೂ ಪಕ್ಷದ ಕಚೇರಿಗೂ ಭೇಟಿ ಇಲ್ಲ ಎಂದು ತಿಳಿದು ಬಂದಿದೆ.

ಬಿಎಸ್ ವೈ ಭೇಟಿ: ಆದರೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಹನ್ನೊಂದು ತಿಂಗಳ ಬಳಿಕ ಮಾಜಿ ಸಿಎಂ‌ ಯಡಿಯೂರಪ್ಪ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ:ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ; ರಾಜ್ಯಪಾಲ, ಸಿಎಂ ಸೇರಿ ಗಣ್ಯರಿಂದ ಸ್ವಾಗತ

ಸಿಎಂ ಬೊಮ್ಮಾಯಿ ಜತೆ ತೆರಳಿ ಪ್ರಧಾನಿಯವರನ್ನು ಯಡಿಯೂರಪ್ಪ ಸ್ವಾಗತಿಸಿದರು. ಈ ಸಂದರ್ಭದಲ್ಲಿ‌‌ ಕೆಲ ಸಮಯ ಮೋದಿ ಯಡಿಯೂರಪ್ಪ ಅವರನ್ನು ಆತ್ಮೀಯವಾಗಿ ಮಾತನಾಡಿಸಿದರು. ಇದನ್ನು ಹೊರತುಪಡಿಸಿದರೆ ಮತ್ತೆ ಯಾವ ರಾಜಕೀಯ ನಾಯಕರನ್ನೂ ಅಧಿಕೃತ ವೇದಿಕೆ ಹೊರತುಪಡಿಸಿ ಎಲ್ಲಿಯೂ ಭೇಟಿ ಇಲ್ಲ ಎಂದು ತಿಳಿದು ಬಂದಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next