Advertisement

ಕೋವಿಡ್-19 ವಿಚಾರದಲ್ಲಿ ರಾಜಕಾರಣ ಮಾಡಲ್ಲ, ಲಾಕ್ ಡೌನ್ ಗೆ ಬೆಂಬಲ ಕೊಡುತ್ತೇವೆ: ದೇವೇಗೌಡ

05:46 PM Apr 14, 2020 | keerthan |

ಬೆಂಗಳೂರು: ಕೋವಿಡ್-19 ವಿಷಯದಲ್ಲಿ ರಾಜಕಾರಣ ಮಾಡುವುದಿಲ್ಲ. ಇದರ ವಿರುದ್ಧ ಹೋರಾಡುತ್ತಿರುವ ಪ್ರಧಾನಿ‌ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಾವು ಬೆಂಬಲ ಕೊಡುತ್ತೇವೆ. ಇದರಲ್ಲಿ ಯಾವುದೇ ಸಂಕೋಚ ಇಲ್ಲ. ಸರ್ಕಾರದ ನಿರ್ಧಾರಗಳಿಗೆ ಬೆಂಬಲ ಕೊಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ದೇಶದ ಪ್ರಧಾನಿಗಳು ಮೇ 3 ರವರೆಗೂ ಲಾಕ್ ಡೌನ್ ಘೋಷಿಸಿದ್ದಾರೆ. ಪ್ರಧಾನಿಗಳ ಹೋರಾಟಕ್ಕೆ  ಎಲ್ಲ ರೀತಿಯ ಸಹಕಾರ ನೀಡಿದ್ದೇವೆ. ಮುಂದೆಯೂ ಸಹಕಾರ ನೀಡುತ್ತೇವೆ ಎಂದರು.

ರಾಜಕಾರಣ ಬೇರೆ. ಆದರೆ ದೇಶದ ವಿಚಾರದಲ್ಲಿ ನಾವು ಜೊತೆಗಿರುತ್ತೇವೆ. ಲಾಕ್ ಡೌನ್ ಸಂದರ್ಭದಲ್ಲಿ ಕೆಲವು ದೋಷಗಳಿವೆ. ಅನೇಕ ಕೂಲಿ ಕಾರ್ಮಿಕರು ಕಾಲ್ನಡಿಗೆಯಲಿ ಗುಳೆ ಹೋಗುತ್ತಿದ್ದಾರೆ. ಅವರಿಗೆ ಊಟ, ತಿಂಡಿಯ ವ್ಯವಸ್ಥೆ ಮಾಡಲಾಗುತ್ತಿಲ್ಲ. ಗುತ್ತಿಗೆದಾರರಿಗೆ ಕಾರ್ಮಿಕರ ರಕ್ಷಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ಕೊಟ್ಟಿದ್ದರೂ ಅನೇಕ ಕಡೆ ಇದನ್ನು ಪಾಲಿಸಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next