Advertisement

ಶಿಕ್ಷಣದಲ್ಲಿ ರಾಜಕೀಯ ಬೇಡ; ಶಾಸಕ ಬಾಬಾಸಾಹೇಬ್ ಪಾಟೀಲ್

04:53 PM Jun 22, 2024 | Team Udayavani |

ಚನ್ನಮ್ಮನ ಕಿತ್ತೂರು: ಮಕ್ಕಳ ಹಾಗೂ ಶಾಲೆಗಳ ಅಭಿವೃದ್ಧಿಗಳನ್ನು ಗಮನದಲ್ಲಿಟ್ಟುಕೊಂಡು ಪಾಲಕರು ಶ್ರಮ ವಹಿಸಬೇಕು. ಶಾಲೆಗಳ ಅಭಿವೃದ್ಧಿಯಲ್ಲಿ ಹಾಗೂ ಶಿಕ್ಷಣದಲ್ಲಿ ರಾಜಕೀಯ ಬೆರೆಸಬಾರದು ಎಂದು ಶಾಸಕ ಬಾಬಾ ಸಾಹೇಬ್ ಪಾಟೀಲ್ ಹೇಳಿದರು.

Advertisement

ಅವರು ಕಾದ್ರೊಳ್ಳಿ ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಪಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಪಾಲಕರು ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ ಉತ್ತಮ ಶಿಕ್ಷಣ ದೊರಕಿಸುವುದರ ಮೂಲಕ ಮಕ್ಕಳನ್ನು ಆಸ್ತಿಯಾಗಿ ಮಾಡಬೇಕು. ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಖಾಸಗಿ ಶಾಲೆಗಳಿಗಿಂತ ಸರಕಾರಿ ಶಾಲೆಗಳು ಉತ್ತಮ ಸಾಧನೆಗಳನ್ನು ಮಾಡಿವೆ. ಗ್ರಾಮೀಣ ಪ್ರದೇಶಗಳಲ್ಲಿ ಪಾಲಕರು ಮಕ್ಕಳಲ್ಲಿನ ಮೊಬೈಲ್ ಗೀಳನ್ನು ತಪ್ಪಿಸಿ ಶಿಕ್ಷಣಕ್ಕೆ ಒತ್ತು ಕೊಡುವಂತೆ ಮಕ್ಕಳನ್ನು ಪ್ರೇರೇಪಿಸಬೇಕು. ಪಾಲಕರು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ವಿದ್ಯಾಭ್ಯಾಸಗಳ ಪ್ರಗತಿ ಕುರಿತು ಶಿಕ್ಷಕರೊಂದಿಗೆ ಚರ್ಚಿಸಿ ಕುಂದು ಕೊರತೆಗಳನ್ನು ನೀಗಿಸುವಲ್ಲಿ ಸಹಾಯ ಹಸ್ತ ನೀಡಬೇಕು ಎಂದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳನ್ನು ಅನಿಗೊಳಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ.

ಕಿತ್ತೂರು ಕ್ಷೇತ್ರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಸರ್ಕಾರ ಅನುದಾನ ಮಂಜೂರಾತಿ ನೀಡಿದ್ದು ಕೆಲಸ ಭರದಿಂದ ಸಾಗಿದೆ ಎಂದರು.

ಗ್ರಾಮೀಣ ವಿದ್ಯಾರ್ಥಿಗಳ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ದಿನಗಳಲ್ಲಿ ಕಾಸರವಳ್ಳಿಯಲ್ಲಿ ಸೈನ್ಸ್ ಜೂನಿಯರ್ ಕಾಲೇಜು ಸ್ಥಾಪಿಸಲಾಗುವುದು ಎಂದು ಹೇಳಿದರು.

Advertisement

ಒಟ್ಟು 30 ಶುದ್ಧ ಕುಡಿಯುವ ನೀರಿನ ಘಟಕಗಳು ಮಂಜುರಾಗಿದ್ದು ಪ್ರಾಮುಖ್ಯತೆಯ ಅನುಗುಣವಾಗಿ ಶಾಲಾ ಆವರಣಗಳಲ್ಲಿ ಇವುಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಗೋರ್ಪಡೆ ಮಾತನಾಡಿ ಶಾಸಕರು ದೇವಾಲಯಗಳಿಗಿಂತ ಶಾಲಾ ದೇಗುಲಗಳ ಅಭಿವೃದ್ಧಿಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಾ ಸಾಗಿರುವುದು ಪ್ರಶಂಸನೀಯವಾಗಿದೆ ಎಂದು ಹೇಳಿದರು.

ನಂತರ ಶಾಸಕರು ಪಾಲಕರ ಹಾಗೂ ವಿದ್ಯಾರ್ಥಿಗಳ ಜೊತೆ ಶಾಲಾಭಿವೃದ್ಧಿ ಕುರಿತು ಸಂವಾದ ನಡೆಸಿದರು. ಶಿಕ್ಷಕರಾದ ಗಜಾನಂದ ಸೊಗಲದ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಶಿಕ್ಷಕರಾದ ಸಿ.ಬಿ. ತುರಮರಿ ವಂದಿಸಿದರು.

ಈ ವೇಳೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next