Advertisement

ಯಾವ ಮಠಾಧೀಶರನ್ನೂ ಬೆದರಿಸಿಲ್ಲ,ಬಿಜೆಪಿಯಲ್ಲಿ ಕಾಂಗ್ರೆಸ್ ಸಂಸ್ಕೃತಿ ಇಲ್ಲ: ಯತ್ನಾಳ್

03:26 PM Mar 26, 2023 | Team Udayavani |

ವಿಜಯಪುರ: ಒಕ್ಕಲಿಗ ಸಮುದಾಯ ಹಾಗೂ ವೀರೇಶ್ವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಘೋಷಣೆ ವಿಚಾರದಲ್ಲಿ ಸಮುದಾಯದ ಶ್ರೀಗಳಿಗೆ ಒತ್ತಡ-ಬೆದರಿಕೆ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾಡಿರುವ ಆರೋಪ ಆಧಾರ ರಹಿತ. ಗೂಂಡಾಗಳ ಬಾಯಲ್ಲಿ ಅದೇ ರೀತಿಯ ಮಾತುಗಳು ಬರುತ್ತವೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದಾರೆ.

Advertisement

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಿರ್ಮಲಾನಂದ ಸ್ವಾಮೀಜಿಗೆ ಹಾಗೂ ಪಂಚಮಸಾಲಿ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿಗೆ ಮೀಸಲಾತಿ ಒಪ್ಪಿಕೊಳ್ಳಿ ಎಂದು ಬಿಜೆಪಿ ನಾಯಕರು ಕರೆ ಮಾಡಿ ಒತ್ತಡ ಹಾಕಿದ್ದಾರೆ ಎಂಬ ಡಿ.ಕೆ.ಶಿವಕುಮಾರ ಮಾಡಿರುವ ಆರೋಪ ಆಧಾರ ರಹಿತವಾಗಿದೆ ಎಂದರು.

ಬಿಜೆಪಿ ಸರ್ಕಾರದ ಐತಿಹಾಸಿಕ ನಿರ್ಧಾರದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ಅವರಿಗೆ ನಮ್ಮನ್ನು ಟೀಕಿಸಲು ಯಾವುದೇ ವಿಷಯಗಳಿಲ್ಲದಂತಾಗಿದೆ. ಹೀಗಾಗಿ ಇದೀಗ ಸ್ವಾಮಿಗಳನ್ನು ಇದರಲ್ಲಿ ಎಳೆದು ತರುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಇದ್ದಂತೆ ಬಿಜೆಪಿ ಪಕ್ಷದಲ್ಲಿ ಯಾರೂ ಗುಂಡಾ ನಾಯಕರಿಲ್ಲ. ಕಾಂಗ್ರೆಸ್ ಮುಖಂಡರಂತೆ ಉಪಾಧ್ಯಾಪಿತನ ಮಾಡುವ ಸಂಸ್ಕೃತಿ ಬಿಜೆಪಿ ಪಕ್ಷದಲ್ಲಿ ಇಲ್ಲ. ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಮೀಸಲಾತಿ ಹೆಚ್ಚಿಸಿದ್ದನ್ನು ಕಾಂಗ್ರೆಸ್ ನಾಯಕರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ವ್ಯರ್ಥ ಟೀಕೆಗಳನ್ನು ಮಾಡುತ್ತಾರೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಎಲ್ಲ ಸಮುದಾಯಗಳಿಗೆ ಮೀಸಲಾತಿ ನೀಡಿದ್ದು, ಪರಿಶಿಷ್ಟ ಸಮುದಾಯಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿದೆ. ಒಳ ಮೀಸಲಾತಿ ನೀಡುವ ಮೂಲಕ ಎಲ್ಲಾ ಸಮುದಾಯದವರಿಗೂ ಮೀಸಲಾತಿ ನೀಡಿರುವುದು ದೊಡ್ಡ ಸಾಧನೆ ಎಂದರು.

Advertisement

ಎಲ್ಲಾ ಸಮುದಾಯಗಳ ಮೀಸಲಾತಿ ನೀಡುವ ಉದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೇರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮೀಸಲಾತಿ ಕಲ್ಪಿಸಲು ಸೂಕ್ತ ನಿರ್ದೇಶನ ನೀಡಿದ್ದರು. ಅದರಂತೆ ಪ್ರಧಾನಿ ಮೋದಿ ಹಾಗೂ ಸಚಿವ ಅಮಿತ್ ಶಾ ಅವರ ನಿರ್ದೇಶನದಂತೆ ಎಲ್ಲ ಸಮುದಾಯದವರಿಗೆ ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಕಲ್ಪಿಸಿದ್ದೇವೆ ಎಂದರು.

2-ಎ ಪ್ರವರ್ಗದಲ್ಲಿ 102 ಜಾತಿಗಳಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬ ಉದ್ದೇಶದಿಂದ ಒಕ್ಕಲಿಗರು ಹಾಗೂ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿ ನೀಡಲಾಗಿದೆ. 3-ಬಿ ಪ್ರವರ್ಗದಲ್ಲಿದ್ದ 2-ಡಿ ಪ್ರವರ್ಗ ರೂಪಿಸಿ ಶೇ.7 ಮೀಸಲಾತಿ ಕೊಡಲಾಗಿದೆ. ಇದರಿಂದ ಶೇ.15 ಹಾಗೂ 7 ಸೇರಿ ಹಿಂದುಳಿದ ಸಮುದಾಯಗಳಿಗೆ ಶೇ.22 ರಷ್ಟು ಮೀಸಲಾತಿ ಸಿಕ್ಕಿದೆ ಎಂದರು.

ಪರಿಶಿಷ್ಟ ಜಾತಿ-ಪಂಗಡದವರಿಗೂ ಮೀಸಲಾತಿ ಹೆಚ್ಚಿಸಿದ್ದು, ಬಹು ವರ್ಷಗಳ ಅವರ ಬೇಡಿಕೆಯಂತೆ ಒಳ ಮೀಸಲಾತಿಯ ಸಾಮಾಜಿಕ ನ್ಯಾಯ ಕಲ್ಪಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next